ದೊಡ್ಡಬಳ್ಳಾಪುರ: ಪಡಿತರ ವಿತರಣೆಗೆ ಪೋರ್ಟಬಿಲಿಟಿ ಸಮಸ್ಯೆ

ದೊಡ್ಡಬಳ್ಳಾಪುರ : ಅಕ್ಟೋಬರ್ ತಿಂಗಳ ಪಡಿತರ ಆಹಾರಧಾನ್ಯ ಬಿಡುಗಡೆಯಾಗಿದ್ದು, ಹಲವು ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ದಾಸ್ತಾನು ಖಾಲಿ ಆಗಿದ್ದು, ಪಡಿತರದಾರರು ನ್ಯಾಯಬೆಲೆ ಅಂಗಡಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಡಿತರದಾರರ ಅಲೆದಾಟ: ಅ.16ರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಟೋಬರ್ ತಿಂಗಳಿನ ಪಡಿತರ ಧಾನ್ಯ ವಿರಣೆ ಮಾಡಲಾಗುತ್ತಿದೆ. ಆದರೆ ಹಲವಾರು ನ್ಯಾಯಬೆಲೆ ಅಂಗಡಿಗಳು, ಹೆಚ್ಚವರಿ ಸಿಬ್ಬಂದಿ ನೇಮಿಸಿಕೊಂಡು ಪಡಿತರ ವಿತರಿಸಿ, ಬಾಗಿಲು ಮುಚ್ಚಿವೆ.  ಅಂತರಾಜ್ಯ ಹಾಗೂ ಅಂತರ ಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಯಾರಿಗೂ ಸಹ ರೇಷನ್ ನಿರಾಕರಿಸುವಂತಿಲ್ಲ. ಕೆಲವು ಅಂಗಡಿಗಳಲ್ಲಿ ಪೋರ್ಟಬಿಲಿಟಿ ಪಡಿತರದಾರರು ರೇಷನ್ ಪಡೆಯುವುದರಿಂದ, ಅಲ್ಲಿನ ನ್ಯಾಯಬೆಲೆ ಅಂಗಡಿಗಳಲ್ಲಿನ ಖಾಯಂ ಪಡಿತರದಾರರು ಬೇರೆ ಅಂಗಡಿಗಳಿಗೆ ಅಲೆಯಬೇಕಿದೆ. ಅಂತೆಯೇ, ಮಾಲೀಕರು ನ್ಯಾಯಬೆಲೆ ಅಂಗಡಿಗಳಲ್ಲಿನ ಪಡಿತರದಾರರಿಗೆ ಮೊದಲ ಆದ್ಯತೆ ಎಂದು ಹೇಳುತ್ತಿರುವುದರಿಂದ  ಪೋರ್ಟಬಿಲಿಟಿ ಪಡಿತರದಾರರು ಬೇರೆಡೆ ಅಲೆದಾಡುವ ಸ್ಥಿತಿ ಉಂಟಾಗಿದೆ.

ಹೆಚ್ಚಿನ ಪಡಿತರ ನೀಡಲಿ: ಪಡಿತರ ವಿತರಣೆ ಆರಂಭಗೊಂಡ ದಿನಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರು ಮನೆಗೆ ತೆರಳಿ, ಮರುದಿನ ಹೆಚ್ಚಿನ ಜನಸಂದಣಿಯಾಗಿತ್ತು. ಈಗ ನಮ್ಮ ಅಂಗಡಿಯ ಪಡಿತರದಾರರಿಗೆ ರೇಷನ್ ನೀಡದಿದ್ದರೆ ಜಗಳ ಮಾಡುತ್ತಾರೆ. ಅನಿವಾರ್ಯವಾಗಿ ಪೋರ್ಟಬಿಲಿಟಿ ಪಡಿತರದಾರರಿಗೆ ಮಾರನೇ ದಿನ ಬರುವಂತೆ ಹೇಳಲಾಗುತ್ತಿದೆ. ಸರ್ಕಾರ ಹೆಚ್ಚಿನ ದಾಸ್ತಾನು ನೀಡುವುದು ಹಾಗು ಎಲ್ಲಾ ಪಡಿತರ ಅಂಗಡಿಗಳು ಒಂದೇ ಸಮಯ ಪಾಲನೆ ಮಾಡುವುದನ್ನು ಜಾರಿ ಮಾಡಿದರೆ ಸಮಸ್ಯೆ ಬಗೆ ಹರಿಸಬಹುದಾಗಿದೆ ಎನ್ನುತ್ತಾರೆ ಕುಚ್ಚಪ್ಪನ ಪೇಟೆಯ ನ್ಯಾಯಬೆಲೆ ಅಂಗಡಿ ಮಾಲೀಕ ಗಂಗಾಪ್ರಸಾದ್.

ಸಮರ್ಪಕ ವಿತರಣೆಗೆ ಕ್ರಮ: ಪಡಿತರ ಧಾನ್ಯಗಳನ್ನು ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಕಾರ್ಡ್‍ಗಳ ಆಧಾರದ ಮೇಲೆ ನೀಡಲಾಗುತ್ತಿದ್ದು, ಲಭ್ಯತೆ ಇದ್ದರೆ ಶೇ.10ರವರೆಗೆ ಹೆಚ್ಚಿಸಬಹುದಾಗಿದೆ. ಈಗಾಗಲೇ ಬಾಗಿಲು ಹಾಕಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ದಾಸ್ತಾನು ಖಾಲಿಯಾಗಿದ್ದು, ಇದರಲ್ಲಿ ಪೋರ್ಟಬಿಲಿಟಿ ಪಡಿತರದಾರರು ಸಹ ರೇಷನ್ ಪಡೆದಿದ್ದಾರೆ. ದಾಸ್ತಾನು ಇದ್ದರೂ ಸಹ ಸಮಯಕ್ಕೆ ಸರಿಯಾಗಿ ವಿತರಣೆ ಮಾಡದ ನ್ಯಾಯಬೆಲೆ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಶಿರಸ್ತೆದಾರ್ ರಮೇಶ್ ತಿಳಿಸಿದ್ದಾರೆ.

ಪಡಿತರ ವಿವರ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಅಕ್ಟೋಬರ್ ತಿಂಗಳಿಗೆ ಪಡಿತರ ಧಾನ್ಯ ಬಿಡುಗಡೆಯಾಗಿದೆ. ಅಂತ್ಯೋದಯ ಪಡಿತರ ಚೀಟಿ ಕಾರ್ಡ್‍ದಾರರಿಗೆ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪ್ರತಿ ಕಾರ್ಡಿಗೆ ಉಚಿತವಾಗಿ 35 ಕೆಜಿ ಅಕ್ಕಿ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತವಾಗಿ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ  ಪ್ರತಿ ಕಾರ್ಡ್‍ಗೆ 2 ಕೆ.ಜಿ ಕಡಲೆ ಕಾಳು ವಿತರಿಸಲಾಗುವುದು.

ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಕಾರ್ಡಿಗೆ 2 ಕೆ.ಜಿ ಗೋಧಿ ಉಚಿತವಾಗಿ ವಿತರಿಸಲಾಗುವುದು.  ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಕಾರ್ಡ್‍ಗೆ 2 ಕೆ.ಜಿ ಕಡಲೆಕಾಳು ಉಚಿತವಾಗಿ ವಿತರಿಸಲಾಗುವುದು. ಎಪಿಎಲ್ ಪಡಿತರ ಚೀಟಿ ಹೊಂದಿರುವ, ಒಪ್ಪಿಗೆ ನೀಡಿದ ಪಡಿತರ ಚೀಟಿಗೆ ಪ್ರತಿ ಕೆ.ಜಿ ಗೆ ರೂ.15 ರಂತೆ ಏಕ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ 2 ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆ.ಜಿ ಅಕ್ಕಿ ವಿತರಿಸಲಾಗುವುದು ಎಂದು ಆಹಾರ ಇಲಾಖೆ ಪ್ರಕಟಣೆ ತಿಳಿಸಿದೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]