ಬೆಂಗಳೂರು: ನವೆಂಬರ್ 17ರಿಂದಪದವಿ ಕಾಲೇಜು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಪದವಿ ತಿಳಿಸಿದ್ದಾರೆ.
ಇಂಜಿನಿಯರಿಂಗ್ ಹಾಗೂ ಡಿಪ್ಲಮೋ ಕಾಲೇಜುಗಳಿಗೆ ಬರಲು ವಿದ್ಯಾರ್ಥಿಗಳಿಗೆ ಯಾವುದೇ ಒತ್ತಾಯ ಇಲ್ಲ. ಅಲ್ಲದೆ ವಿದ್ಯಾರ್ಥಿಗಳ ಅನುಮತಿ ಪತ್ರ ಅಗತ್ಯ.ವಿದ್ಯಾರ್ಥಿಗಳು ಕಾಲೇಜಿಗೂ ಬರಬಹುದು ಅಥವಾ ಆನ್ಲೈನ್ ತರಗತಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಇದರಲ್ಲಿ ಯಾವುದೇ ಒತ್ತಾಯ ಇಲ್ಲವೆಂದರು.
ವಿದ್ಯಾರ್ಥಿಗಳು ಕಾಲೇಜಿಗೆ ಬರುವ ಸಂಖ್ಯೆ ಆಧರಿಸಿ ಶಿಫ್ಟ್ ಹಾಗೂ ಬ್ಯಾಚ್ ಮಾಡುವ ನಿರ್ಧಾರವನ್ನು ಶುಕ್ರವಾರ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಹಾಸ್ಟೆಲ್ಗಳಲ್ಲೂ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು. ಕೋವಿಡ್ ಹಾಗೂ ಯುಸಿಜಿ ಗೈಡ್ಲೈನ್ ಪ್ರಕಾರ ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಮಾಹಿತಿ ನೀಡಿದರು.

