ಇಂದು ಸಂಜೆ 5 ರಿಂದ ಅ.28ರ ಮಧ್ಯರಾತ್ರಿ 12ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿರ್ಬಂಧ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ದ್ವೈವಾರ್ಷಿಕ ಚುನಾವಣೆ-2020ರ ಸಂಬಂಧ ಮತದಾನವು ದಿನಾಂಕ: 28/10/2020 ರಂದು ಬೆಳಿಗ್ಗೆ 8:00 ರಿಂದ ಸಂಜೆ 5:00 ಗಂಟೆಯವರೆಗೂ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 4 ತಾಲ್ಲೂಕುಗಳ ಒಟ್ಟು 17 ಮತಗಟ್ಟೆಗಳಲ್ಲಿ ಮತದಾರರು ಮತ ಚಲಾಯಿಸಲಿದ್ದು, ಮತದಾನವು ಶಾಂತಿ, ಮುಕ್ತ,‌ ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತವಾಗಿ ನಡೆಸುವ ಸಲುವಾಗಿ ಮತದಾನ ಅಂತ್ಯಗೊಳ್ಳುವುದಕ್ಕೆ ನಿಗದಿಪಡಿಸಿರುವ ಅವಧಿಯು 48 ಗಂಟೆಗಳ ಪೂರ್ವದಲ್ಲಿ ಅಂದರೆ ದಿನಾಂಕ: 26/10/2020 ರ ಸಂಜೆ 5:00 ಗಂಟೆಯಿಂದ ದಿನಾಂಕ: 28/10/2020 ರ ಸಂಜೆ 5:00 ಗಂಟೆಯವರೆಗಿನ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಹಾಗೂ ಮತದಾರರು ನಿರ್ಭೀತವಾಗಿ ಮತದಾನ ಮಾಡಲು ಮುಕ್ತ ಹಾಗೂ ನ್ಯಾಯಸಮ್ಮತ ಮತದಾನದ ವಾತಾವರಣ ಕಲ್ಪಿಸಲು ಪ್ರಜಾ ಪ್ರತಿನಿಧಿ ಕಾಯ್ದೆ, 1951ರ ಕಲಂ 126 ಮತ್ತು 126ಎ ಗಳ ಅನ್ವಯ ಕ್ರಮ ಕೈಗೊಳ್ಳುವುದು ಅತಿ ಅವಶ್ಯಕವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ:26/10/2020 ರ ಸಂಜೆ 5:00 ರಿಂದ ಮತದಾನ ನಡೆಯುವ ದಿನಾಂಕ 28/ 10/2020 ರ ಸಂಜೆ 5:00 ಗಂಟೆಯವರೆಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಯಾವುದೇ ಮತ ಕ್ಷೇತ್ರಗಳಲ್ಲಿ ಯಾವುದೇ ವ್ಯಕ್ತಿಯು ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆ ನಡೆಸುವುದಾಗಲೀ, ಮೆರವಣಿಗೆ ಮಾಡುವುದಾಗಲಿ, ಯಾವುದೇ ಸಭೆ ಸಮಾರಂಭಗಳನ್ನು ಆಯೋಜಿಸುವುದಾಗಲೀ ಹಾಗೂ ಯಾವುದೇ ಸಭೆಗೆ ಹಾಜರಾಗುವುದಾಗಲೀ ನಿರ್ಬಂಧಿಸಿದೆ ಹಾಗೂ ಎಲ್ಲಾ ಬಹಿರಂಗ ಪ್ರಚಾರಗಳನ್ನು ನಿಷೇಧಿಸಿದೆ.

ಎಲ್ಲಾ ರಾಜಕೀಯ ಪಕ್ಷಗಳಿಂದ ಹಾಗೂ ಅಭ್ಯರ್ಥಿಗಳಿಂದ ಯಾವುದೇ ಪ್ರಚಾರ ಕೈಗೊಳ್ಳಲು ನಿರ್ಬಂಧಿಸಿದೆ. ಆದರೆ 5 ಜನರಿಗೆ ಸೀಮಿತಗೊಳಿಸಿ ಮನೆ ಮನೆ ಭೇಟಿ ನೀಡಿ ಪ್ರಚಾರಕ್ಕೆ ಮಾತ್ರ ಅವಕಾಶವಿರುತ್ತದೆ. ಈ ಅವಧಿಯಲ್ಲಿ ರಾಜಕೀಯ ಪಕ್ಷಗಳು, ಪಕ್ಷದ ಕಾರ್ಯಕರ್ತರು, ಪ್ರಚಾರ ಮತ್ತು ಸಭೆಗಳನ್ನು ನಿರ್ವಹಿಸುವವರು ಮುಂತಾದವರು, ಹೊರಗಿನ ಕ್ಷೇತ್ರದವರು, ಕ್ಷೇತ್ರದ ಮತದಾರರಲ್ಲದವರು ಯಾರೂ ಸಹ ಕ್ಷೇತ್ರದ ವ್ಯಾಪ್ತಿಯ ಒಳಗೆ ಇರತಕ್ಕದ್ದಲ್ಲ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಸಾರ್ವಜನಿಕರಿಗೆ ಸಿನಿಮಾ, ದೂರದರ್ಶನ ಹಾಗೂ ಇತರೆ ಮಾಧ್ಯಮಗಳ ಮೂಲಕ ಅಂದರೆ ಮೊಬೈಲ್, ರೇಡಿಯೋ ಹಾಗೂ ಇತರೆ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ರಾಜಕೀಯ ಚರ್ಚೆಗಳು, ವಿಶ್ಲೇಷಣೆ, ದೃಶ್ಯ ಅಥವಾ ಆಡಿಯೋ ಬೈಟ್ ಗಳನ್ನು ಪ್ರಚಾರ ಮಾಡತಕ್ಕದ್ದಲ್ಲ. 

ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ಮನೋರಂಜನಾ ಕಾರ್ಯಕ್ರಮಗಳಾದ ನಾಟಕ, ಆರ್ಕೆಸ್ಟ್ರಾ, ಸಂಗೀತ ಸಂಜೆ ಹಾಗೂ ಇತರೆ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸತಕ್ಕದ್ದಲ್ಲ. 

ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಕಲಂ135ಸಿ ರ ಅನ್ವಯ ದಿನಾಂಕ: 26/10/2020ರ ಸಂಜೆ 5:00 ಗಂಟೆಯಿಂದ ದಿನಾಂಕ: 28/10/2020ರ ಮಧ್ಯರಾತ್ರಿ 12:00 ಗಂಟೆಯವರೆಗೂ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಸಾಗಾಣಿಕೆಯನ್ನು ನಿರ್ಬಂಧಿಸಿ ಒಣ ದಿನಗಳನ್ನು (ಡ್ರೈ ಡೇಸ್) ಘೋಷಿಸಿದೆ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ  ಮದ್ಯದಂಗಡಿಗಳನ್ನು ಈ ಅವಧಿಯಲ್ಲಿ ಮುಚ್ಚಲು ಆದೇಶಿಸಿದೆ. ಇದಲ್ಲದೇ ಈ ಅವಧಿಯಲ್ಲಿ ಯಾವುದೇ ರೀತಿಯ ಧ್ವನಿ ವರ್ಧಕಗಳನ್ನು ಬಳಸತಕ್ಕದ್ದಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್ ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]