ದೊಡ್ಡಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ, ದೊಡ್ಡಬಳ್ಳಾಪುರದ ತಾಲೂಕು ಕಚೇರಿ ಮತದಾನ ಕೇಂದ್ರದ ಬಳಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ ಪ್ರಸಂಗ ನಡೆದಿದೆ.
ತಾಲೂಕು ಕಚೇರಿ ಮತದಾನ ಕೇಂದ್ರದ ಮತಗಟ್ಟೆ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.
ಇದೇ ಕಾರಣಕ್ಕೆ ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ ತಾರಕಕ್ಕೇರಿ, ಬಳಿಕ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದರು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

