ದೊಡ್ಡಬಳ್ಳಾಪುರ: ನಗರದ ಹೊರವಲಯದ ಮೇಘಾಂಜಲಿ ಕಲ್ಯಾಣ ಮಂದಿರದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಆಲಹಳ್ಳಿಯ ನಿವಾಸಿ ಉದಯ್ ಕುಮಾರ್ (23) ಮೃತಪಟ್ಟ ಯುವಕನಾಗಿದ್ದಾನೆ. ಆಲಹಳ್ಳಿಯಿಂದ ಸಹೋದರ ಮೂರ್ತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಕುಳಿತು ಹೋಗುತ್ತಿರುವಾಗ ಟ್ಯಾಂಕರ್ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ವಾಹನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಚಾಲನೆ ಮಾಡುತ್ತಿದ್ದ ಮೂರ್ತಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

