ಬೆಂಗಳೂರು: ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ “65ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ” ಕಾರ್ಯಕ್ರಮವನ್ನು ನವೆಂಬರ್ 01 ರಂದು ಬೆಳಗ್ಗೆ 9.00 ಗಂಟೆಗೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಧ್ವಜಾರೋಹಣ ನೆರೆವೇರಿಸಲಿದ್ದು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ಎನ್.ಬಚ್ಚೇಗೌಡ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಪ್ರಭಾರ ಅಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್ ಅವರ ಘನ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ(ಅಪ್ಪಕಾರನಹಳ್ಳಿ ವೆಂಕಟೇಶ್), ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ|| ಕೆ.ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಎನ್.ನಾಗರಾಜ್(ಎಂ.ಟಿ.ಬಿ), ಅ.ದೇವೇಗೌಡ, ಎಸ್.ರವಿ ಹಾಗೂ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎ.ರವಿ, ದೇವನಹಳ್ಳಿ ತಾಲ್ಲೂಕು ಪಂಚಾಯತಿ ಅಧ್ಯಕ್ಷರಾದ ವೈ.ಎನ್.ಶಶಿಕಲಾ, ಉಪಾಧ್ಯಕ್ಷರಾದ ಲಲಿತಮ್ಮ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರವಿ.ಡಿ.ಚನ್ನಣ್ಣನವರ್ ಸೇರಿದಂತೆ ಜಿಲ್ಲೆಯ ಎಲ್ಲಾ ಜಿಲ್ಲಾ ಪಂಚಾಯತಿ ಸದಸ್ಯರು, ತಾಲ್ಲೂಕು ಪಂಚಾಯತಿ ಸದಸ್ಯರು, ನಗರಸಭೆ ಸದಸ್ಯರು, ಪುರಸಭೆ ಸದಸ್ಯರು, ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಮುಖಂಡರುಗಳು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ವಿವರ:
* ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಮತ್ತು ರಾಷ್ಟ್ರ ಗೀತೆ.
* ನಾಡ ಗೀತೆ ಮತ್ತು ರೈತ ಗೀತೆ.
* ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂದೇಶ.
* ಕನ್ನಡ ವಿಷಯದಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಶಸ್ತಿ ವಿತರಣೆ.
* ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿತರಣೆ.
* ವಂದನಾರ್ಪಣೆ.

