ಬೆಂಗಳೂರು: ಕೋವಿಡ್-19 ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, “ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ”ಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
“ಆದಿಕಾವ್ಯ ರಾಮಾಯಣದ ಕರ್ತೃ, ಶ್ರೀ ಮಹರ್ಷಿ ವಾಲ್ಮೀಕಿ” ಅವರ ಭಾವಚಿತ್ರಕ್ಕೆ, ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ: ಜಗದೀಶ್.ಕೆ.ನಾಯಕ್ ಪುಷ್ಪ ನಮನ ಸಲ್ಲಿಸಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

