ಬಾಗಲಕೋಟೆ: ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ, ಹಿರಿಯ ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ ನಡೆದಿದೆ.
ಮನೆಯ ಬಾಗಿಲು ಮುರಿದು ಕಳ್ಳತನ ನಡೆದಿದ್ದು, ಅಪಾರ ಪ್ರಮಾಣದ ವಸ್ತು ಮತ್ತು ಹಣ ಕದ್ದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬನಹಟ್ಟಿ ಸಿಪಿಐ ಕರುಣೇಶಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖದೀಮರನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

