ದೊಡ್ಡಬಳ್ಳಾಪುರ: ನಕಲಿ ದಾಖಲೆ ಸೃಷ್ಠಿಸಿ ಭೂಮಿ ಮಾರಾಟ ಜಾಲ ಪತ್ತೆ / ಪೊಲೀಸ್ ಠಾಣೆಗೆ ದೂರು ನೀಡಿದ ಉಪ ನೋಂದಣಾಧಿಕಾರಿ

ದೊಡ್ಡಬಳ್ಳಾಪುರ: ಕೋಟ್ಯಾಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಠಿಸಿ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ದೊಡ್ಡಬಳ್ಳಾಪುರ ಉಪನೋಂದಣಾಧಿಕಾರಿ ದೇವರಾಜು  ಅವರು ದೂರು ದಾಖಲಿಸಿದ್ದಾರೆ.

ಉಪನೋಂದಣಾಧಿಕಾರಿಗಳು ನೀಡಿರುವ ದೂರಿನಲ್ಲಿ ಇರುವ ಪ್ರಮುಖ ಆರೋಪಿಗಳು ಬಿ.ಎ.ಪ್ರಸನ್ನಕುಮಾರ್, ಗೌರಮ್ಮ, ಅಣ್ಣಯ್ಯಪ್ಪ, ಪಿಳ್ಳಮ್ಮ,ಲಕ್ಷ್ಮಮ್ಮ,ಮಂಜುನಾಥ್,ಬಸವರಾಜ್,ಉಮೇಶ್, ಸಂತೋಷ್, ನಾಗರಾಜ್ ಸೇರಿದಂತೆ ಒಟ್ಟು 14 ಜನರ ಹೆಸರುಗಳು ಇವೆ.

ದೇವನಹಳ್ಳಿ ತಾಲ್ಲೂಕಿನ ಚಿಕ್ಕಜಾಲದ ಕಾಡಿಗಾನಹಳ್ಳಿ ಗ್ರಾಮದ ಸರ್ವೇ ನಂಬರ್ 11/1, ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿ ಗ್ರಾಮದ ಸರ್ವೇ ನಂಬರ್ 26/1, ಅರಳುಮಲ್ಲಿಗೆ ಗ್ರಾಮದ ಸರ್ವೇ ನಂಬರ್ 307/1, ಕುಕ್ಕನಹಳ್ಳಿ ಗ್ರಾಮದಲ್ಲಿ ಏಳು ಎಕರೆ ಜಮೀನಿಗೆ ನಕಲಿ ಪತ್ರಗಳನ್ನು ಸೃಷ್ಠಿಸಿದ್ದಾರೆ.

ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿನ ಬುಕ್ -01,2120/1987-88 ನಂಬರಿನ ದಾನಪತ್ರ, ಬುಕ್-01,2586/1991-92 ನಂಬರಿನ ಕ್ರಯಪತ್ರ, ಬುಕ್ ನಂಬರ್ 01-2276/1991-92 ಬಂಬರಿನ ದಾನಪತ್ರ, ಬುಕ್-012587/1991-92 ನಂಬರಿನ ಹಕ್ಕು ನಿವೃತ್ತಿ ಪತ್ರ,ಬುಕ್-01, 2588/1991-92 ನಂಬರಿನ ಹಕ್ಕು ನಿವೃತ್ತಿ ಪತ್ರಗಳು ನಮ್ಮ ಕಚೇರಿಯ ಅಧಿಕೃತ ದಾಖಲಾತಿ ಪುಸ್ತಕದಲ್ಲಿ ಕಂಡುಬಂದಿಲ್ಲ  ಎಂದು ದೂರಿನಲ್ಲಿ ತಿಳಿಸಿದ್ದಾರೆ.    

ಭೂಮಿ ಖರೀದಿದಾರರಲ್ಲಿ ತಲ್ಲಣ: ಉಪನೊಂದಣಾಧಿಕಾರಿಗಳಿಂದ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದರಿಂದ ತಾಲ್ಲೂಕಿನಲ್ಲಿ ಜಮೀನು ಖರೀದಿಸಿರುವವರು ತಮ್ಮ ಜಮೀನಿನ ದಾಖಲೆಗಳ ನೈಜ್ಯತೆಯ ಬಗ್ಗೆ ಅನುಮಾನ ಪಡುವಂತಾಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರಿಗೆ ಸಮೀಪ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಸವಾಗಿರುವ ಬಹುತೇಕ ಜನ ಉದ್ಯಮಿಗಳು ಸೇರಿದಂತೆ ವಿವಿಧ ವಲಯದಲ್ಲಿ ಹಣ ಉಳಿತಾಯ ಮಾಡಿರುವ ಬಹುತೇಕ ಮಂದಿ ಜಮೀನುಗಳನ್ನು ಖರೀದಿಸಿದ್ದಾರೆ. ಈಗಷ್ಟೇ ಈ ಪ್ರಕರಣ ಬೆಳಕಿಗೆ ಬಂದಿರುವುದರಿಂದ ಜಮೀನಿನ ದಾಖಲೆಗಳ ನೈಜ್ಯತೆ ಕುರಿತಂತೆ ಪರಿಶೀಲಿಸಿಕೊಳ್ಳಲು ತಾಲ್ಲೂಕು ಕಚೇರಿಗೆ ಬರತೊಡಗಿದ್ದಾರೆ.

ಸರ್ಕಾರದ ವಿಳಂಬ ನೀತಿಯೇ ಕಾರಣ: ತಾಲ್ಲೂಕು ಕಚೇರಿಯಲ್ಲಿನ ಕಂದಾಯ ಇಲಾಖೆಗೆ ಸಂಬಂಧಿಸಿದ ಶತಮಾನಗಳಷ್ಟು ಹಳೇಯ ವರ್ಷಗಳ ಎಲ್ಲಾ ರೀತಿಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಆನ್ಲೈನ್ ಮೂಲಕ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡುವ ದೃಷ್ಟಿಯಿಂದ 2011ರಲ್ಲಿಯೇ ಸ್ಕ್ಯಾನ್ ಮಾಡಲಾಗಿತ್ತು. ಆದರೆ ಇಲ್ಲಿಯವರೆಗೂ ಈ ದಾಖಲೆಗಳು ಆನ್ಲೈನ್ ಮೂಲಕ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡದೇ ಇರುವ ಸರ್ಕಾರದ ವಿಳಂಬ ನೀತಿಯೇ ಭೂ ದಾಖಲೆಗಳಲ್ಲಿ ಅಕ್ರಮವಾಗಲು ಕಾರಣವಾಗಿದೆ. ಅದರಲ್ಲು ಬೆಂಗಳೂರು ಸುತ್ತಮುತ್ತಲಿನ ತಾಲ್ಲೂಕುಗಳಲ್ಲಿ ಭೂಮಿಯ ಬೆಲೆ ಹೆಚ್ಚಾಗಿರುವ ಹಿನ್ನೆಯಲ್ಲಿ ಇಂತಹ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳು ಇವೆ. ಅಲ್ಲದೆ ಸಾಮಾನ್ಯ ಜನ ಭೂ ದಾಖಲೆಗಳನ್ನು ಪಡೆಯಲು ತಾಲ್ಲೂಕು ಕಚೇರಿಗೆ ಹತ್ತಾರು ಬಾರಿ ಅಲೆದಾಡಿ ಹಣ ಖರ್ಚು ಮಾಡಿದರು ಸಹ ದೊರೆಯುವುದು ಕಷ್ಟವಾಗಿದೆ. ಈಗಲಾದರು ಸರ್ಕಾರ ಸ್ಕ್ಯಾನ್ ಮಾಡಲಾಗುವ ಎಲ್ಲಾ ಭೂ ದಾಖಲೆಗಳು ಆನ್ಲೈನ್ಮೂಲಕ ಲಭ್ಯವಾಗುವಂತೆ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

(ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]