ದೊಡ್ಡಬಳ್ಳಾಪುರ: ತಾಲೂಕು ಬಗರ್ ಹುಕುಂ ಸಕ್ರಮೀಕರಣ ಸಮಿತಿಯ ಸದಸ್ಯರಾಗಿ ಸರ್ಕಾರದ ವತಿಯಿಂದ ನೇಮಕವಾಗಿರುವ ಮಮತ ಪ್ರಕಾಶರೆಡ್ಡಿ ಅವರನ್ನು ಸನ್ಮಾನಿಸಲಾಯಿತು.
ತಾಲೂಕಿನ ಹೊಸಹಳ್ಳಿಯ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಭಿನಂದನೆ ಕಾರ್ಯಕ್ರಮ ನಡೆಯಿತು.
ಈ ವೇಳೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಶ್ವಥ್ ನಾರಾಯಣ ಕುಮಾರ್, ಬಿಜೆಪಿ ಓಬಿಸಿ ತಾಲ್ಲೂಕು ಉಪಾಧ್ಯಕ್ಷ ಪ್ರಸನ್ನ, ತಾಲ್ಲೂಕು ಬಿಜೆಪಿ ಕಾರ್ಯದರ್ಶಿ ಶಿವಾನಂದ ರೆಡ್ಡಿ, ಪ್ರಗತಿಪರ ರೈತ ಶಿವಪ್ಪ, ಬಿಜೆಪಿ ಎಸ್ಟಿ ಮೋರ್ಚಾ ತಾಲ್ಲೂಕು ಪ್ರದಾನ ಕಾರ್ಯದರ್ಶಿ ಮಂಜುನಾಥ್, ಬಿಜೆಪಿ ಗ್ರಾಮಾಂತರ ಸಾಮಾಜಿಕ ಜಾಲತಾಣ ಸಂಚಾಲಕ ಶಿವಾನಂದರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ್ ರೆಡ್ಡಿ ಮತ್ತಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

