ಬೆಂಗಳೂರು: ಕರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ವರ್ಷದ ದೀಪಾವಳಿಗೆ ಪಟಾಕಿಯನ್ನು ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಾವಳಿಗೆ ಯಾವುದೇ ರೀತಿಯ ಪಟಾಕಿಗೆ ಅವಕಾಶ ಇರೋದಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದಿಂದ ಪಟಾಕಿ ನಿಷೇಧಕ್ಕೆ ನಿರ್ಧಾರ ಮಾಡಲಾಗಿದೆ. ಅಲ್ಲದೆ ಪಟಾಕಿ ನಿಷೇಧಿಸಿ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವುದಾಗಿ ಬಿಎಸ್ ವೈ ತಿಳಿಸಿದ್ದಾರೆ.
ಪಟಾಕಿ ನಿಷೇಧದ ಕುರಿತು ಇಂದು ಸಂಜೆ ಅಧಿಕೃತ ಆದೇಶ ಹೊರಬೀಳಲಿದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

