ದೊಡ್ಡಬಳ್ಳಾಪುರ: ಕಾರುಗಳನ್ನು ಸಾಗಿಸುವ ಕಂಟೇನರ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ನಗರದ ಎಪಿಎಂಸಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತನನ್ನು ಲಿಂಗನಹಳ್ಳಿಯ ಪ್ರವೀಣ್ (26) ಎಂದು ಗುರುತಿಸಲಾಗಿದ್ದು, ಎಪಿಎಂಸಿ ಮಾರುಕಟ್ಟೆಯಿಂದ ಹೊರಬರುವಾಗ. ವೇಗವಾಗಿ ಬಂದ ಲಾರಿಗೆ ಸಿಕ್ಕು ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಹರಿತಲೇಖನಿಗೆ ತಿಳಿಸಿದ್ದಾರೆ.
ಘಟನೆ ಕುರಿತಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರದ ಎಪಿಎಂಸಿ ಮಾರುಕಟ್ಟೆಗೆ ತೆರಳುವ ಎರಡು ದ್ವಾರಗಳ ಬಳಿ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ಹಾದು ಹೋಗಿರುವುದರಿಂದ ಅಪಘಾತ ಪ್ರಕರಣ ಹೆಚ್ಚುತ್ತಿರುವುದರಿಂದ ತ್ವರಿತವಾಗಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಬೇಕೆಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಒತ್ತಾಯಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

