ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಭಾನುವಾರ ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದ್ದು ಶೇ.94ರಷ್ಟು ಮತದಾನವಾಗಿದೆ ಎಂದು ಮೂಲಗಳು ಹರಿತಲೇಖನಿಗೆ ತಿಳಿಸಿವೆ.
3691 ಮತದಾರರಲ್ಲಿ 3374 ಮಂದಿ ಮತದಾನ ಮಾಡಿದ್ದು ಶೇ.94 ರಷ್ಟು ಮತದಾನ ನಡೆದಿದೆ. ‘ಎ’ ತರಗತಿಯಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಎಂ.ವೆಂಕಟೇಶ್, ಸಿದ್ದರಾಮಯ್ಯ, ಮಾರೇಗೌಡ, ಎಂ.ಗೋವಿಂದರಾಜ್ ಆಯ್ಕೆಯಾಗಿದ್ದಾರೆ. ಉಳಿದ ಮತ ಎಣಿಕೆ ಕಾರ್ಯ ಮುಂದುವರೆದಿದ್ದು ಕೆಲವೆ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ.
ಬೆಳಿಗ್ಗೆ 9 ಗಂಟೆಯಿಂದ ಆರಂಭವಾದ ಮತದಾನದಲ್ಲಿ ನೂರಾರು ಜನ ಸಾಲುಗಟ್ಟಿ ನಿಂತು ಮತ ಚಲಾಯಿಸಿದರು. ಹಿರಿಯರು ವೀಲ್ ಚೇರ್‌ಗಳಲ್ಲಿ ಬಂದು ಸಹ ಮತಚಲಾಯಿಸಿದ್ದು ವಿಶೇಷವಾಗಿತ್ತು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

