ದೊಡ್ಡಬಳ್ಳಾಪುರ: ಬೀದಿ ಬದಿ ವ್ಯಾಪಾರಿಗಳು ಆರ್ಥಿಕವಾಗಿ ಸದೃಢವಾಗಲು ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭಾರ್ ಸ್ವಾ ನಿಧಿ ಯೋಜನೆ ಸಹಕಾರಿಯಾಗಲಿದ್ದು, ಯೋಜನೆಯಡಿ 10 ಸಾವಿರ ರೂಗಳ ಕಿರು ಸಾಲವನ್ನು ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳು ಸೂಕ್ತ ದಾಖಲಾತಿ ನೀಡಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯೋಜನಾ ನಿರ್ದೇಶಕರಾದ ಬಿ.ಎಸ್.ಸುಮಾ ತಿಳಿಸಿದ್ದಾರೆ.
ನಗರದ ಪುರಭವನದಲ್ಲಿ ನಗರಸಭೆ ವತಿಯಿಂದ ಆಯೋಜಿಸಿದ್ದ ಅರ್ಜಿ ಸ್ವೀಕಾರ ಕೇಂದ್ರಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ನಗರ ಪ್ರದೇಶದ ಜನಸಂಖ್ಯೆಯ ಶೇ.1ರಷ್ಟು ಮಂದಿಗೆ ಯೋಜನೆಯ ಸವಲತ್ತು ನೀಡುವ ಗುರಿ ಹೊಂದಲಾಗಿದೆ. ಅಂತೆಯೇ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ-931, ಹೊಸಕೋಟೆ-570, ನೆಲಮಂಗಲ-372, ದೇವನಹಳ್ಳಿ-281, ವಿಜಯಪುರ-349 ಸೇರಿ 2,503 ಫಲಾನುಭವಿಗಳಿಗೆ ಕಿರು ಸಾಲ ನೀಡುವ ಗುರಿ ಹೊಂದಲಾಗಿದೆ. ಈವರೆಗೆ 1392 ಅರ್ಜಿಗಳನ್ನು ಸ್ವೀಕರಿಸಿ, ಅಪ್‍ಲೋಡ್ ಮಾಡಲಾಗಿದ್ದು, 342 ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಗಿದೆ. ಅರ್ಹರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಪೋಟೋಗಳ ದಾಖಲಾತಿಗಳನ್ನು ಅರ್ಜಿ ಸಲ್ಲಿಕೆ ವೇಳೆ ನೀಡಬೇಕಿದೆ ಎಂದರು.
ಸ್ವಾ ಯೋಜನೆಯ ಸಮುದಾಯ ಸಂಘಟಕರಾದ ಎಸ್.ಮೀನಾ ಮಾತನಾಡಿ, ದೊಡ್ಡಬಳ್ಳಾಪುರ ನಗರದಲ್ಲಿ ಅರ್ಜಿಗಳನ್ನು ಪುರಭವನದಲ್ಲಿ ಮೂರು ದಿನಗಳ ಕಾಲ ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದ್ದು, ಈವರೆಗೆ 395 ಅರ್ಜಿಗಳನ್ನು ಅಪಲೋಡ್ ಮಾಡಲಾಗಿದೆ. ಫಲಾನುಭವಿಗಳಿಗೆ ನೀಡಲಾಗುವ 10 ಸಾವಿರ ರೂಗಳ ಸಾಲಕ್ಕೆ ಶೇ.2 ರಷ್ಟು ಮಾತ್ರ ಬಡ್ಡಿ ವಿಸಲಾಗುತ್ತಿದು, ಉಳಿದ ಶೇ.7ರಷ್ಟು ಬಡ್ಡಿಯನ್ನು ಕೇಂದ್ರ ಸರ್ಕಾರ ಭರಿಸಲಿದೆ. ಪೇಟಿಎಮ್ ಸೌಲಭ್ಯ ಅಳವಡಿಸಿಕೊಂಡಿದ್ದರೆ 1000 ರೂಗಳ ಕ್ಯಾಷ್ ಬ್ಯಾಕ್ ದೊರೆಯಲಿದೆ. ಫಲಾನುಭವಿಗಳು ಪುರಭವನದಲ್ಲಿ ಶೀಘ್ರ ಅರ್ಜಿ ಸಲ್ಲಿಸಬೇಕಿದೆ ಎಂದರು.
ಈ ವೇಳೆ ನಗರಸಭೆ ಪೌರಾಯುಕ್ರ ರಮೇಶ್ ಎಸ್.ಸುಣಗಾರ್, ಸ್ವಾ ಯೋಜನೆಯ ಜಿಲ್ಲಾ ನೋಡಲ್ ಅಕಾರಿ ಮಹೇಶ್ ಸೇರಿದಂತೆ ನಗರಸಭೆ ಸಿಬ್ಬಂದಿ ಹಾಜರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

