ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿಡಲಾಗಿದ್ದ ಹಣವನ್ನು ಹಾಡುಹಗಲೆ ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ.
ನ್ಯಾಯವಾದಿ ನರಸಿಂಹಮೂರ್ತಿ ಎನ್ನುವವರು 3ಲಕ್ಷ 50 ಸಾವಿರ ಹಣವನ್ನು ಡ್ರಾಮಾಡಿಕೊಂಡು ಬಂದು ಕಾರಿನಲ್ಲಿಟ್ಟು, ನ್ಯಾಯಾಲಯದ ಆವರಣದಲ್ಲಿ ಕಾರನ್ನು ನಿಲ್ಲಿಸಿ ಕಲಾಪದಲ್ಲಿ ಪಾಲ್ಗೊಳ್ಳಲು ತೆರಳಿದಾಗ. ಅವರನ್ನು ಹಿಂಬಾಲಿಕೊಂಡು ಬಂದಿರಬಹುದು ಎನ್ನಲಾಗುತ್ತಿರುವ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕಾರಿನ ಕಿಟಕಿಗಾಜು ಒಡೆದು ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್ ಹರಿತಲೇಖನಿಗೆ ತಿಳಿಸಿದ್ದಾರೆ.
ಘಟನೆ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

