ನೆಲಮಂಗಲ: ರಂಗೋಲಿ ಸ್ಪರ್ಧೆ ಏರ್ಪಡಿಸಿ,ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸುವ ವಿಶೇಷ ಕಾರ್ಯಕ್ರಮದ ಮೂಲಕ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ವಿಶಿಷ್ಠವಾಗಿ ಕರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದ್ದಾರೆ.
ಕಳಲುಘಟ್ಟ ಗ್ರಾಮ ಪಂಚಾಯಿತಿ ವತಿಯಿಂದ ಬಿದಲೂರು ಹಾಗೂ ಕಳಲುಘಟ್ಟ ಗ್ರಾಮಗಳಲ್ಲಿ ಸ್ವಚ್ಛೋತ್ಸವ ನಿತ್ಯೋತ್ಸವ, ಸ್ವಚ್ಛ ಸಂಕೀರ್ಣ, ಕಾರ್ಯಕ್ರಮದ ಅಂಗವಾಗಿ ಕಸ ವಿಂಗಡಣೆ, ನೀರಿನ ಸದ್ಬಳಕೆ, ಮತ್ತು ಗ್ರಾಮಸ್ಥರಿಗೆ ಕಸ ಸಂಗ್ರಹಕ್ಕಾಗಿ ಬಕೆಟ್ ಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ ಪದ್ಮನಾಭ , ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ನಟರಾಜ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಗೀತಾ ಮಣಿ, ಅಂಗನವಾಡಿ ಮೇಲ್ವಿಚಾರಕಿ ನಿರ್ಮಲ, ಮಕ್ಕಳ ಸಹಾಯವಾಣಿ ಇಲಾಖೆಯ ವಿನುತ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥೆಯ ಆಫ್ರೋಜ್ ಪಾಷಾ ಮತ್ತಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

