ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಶಾಲೆಯ ಶಿಕ್ಷಕ ವಿನಯ್ ಕುಮಾರ್ (42) ತೀವ್ರ ಅನಾರೋಗ್ಯದ ಕಾರಣ ಇಂದು ನಿಧನರಾಗಿದ್ದಾರೆ.
ಮೃತರು ಮಡದಿ ಹಾಗೂ ಮಗನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಅವರ ಸ್ವಂತ ಗ್ರಾಮವಾದ ಸೊನಗಾನಹಳ್ಳಿಯಲ್ಲಿ ಇಂದು ನಡೆಯಲಿದೆ ಎಂದು ಕುಟುಂಬದ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಇತ್ತೀಚೆಗಷ್ಟೆ ಗುಂಜೂರಿಗೆ ವರ್ಗವಾಗಿದ್ದ ವಿನಯ್ ಸಜ್ಜನ ಶಿಕ್ಷಕರೆಂದು ಸಾರ್ವಜನಿಕರಿಂದ ಪ್ರಶಂಸೆ ಪಡೆದಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

