ಬೆಂಗಳೂರು: ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುರಿಯಲಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದ್ದು , ಸಂಜೆಯಾಗುತ್ತಿದ್ದಂತೆ ಮಳೆ ಧಾರಾಕಾರವಾಗ ಸುರಿಯಲಾರಂಭಿಸಿದೆ. ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಮಳೆ ಪ್ರಮಾಣ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

