ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಎದ್ದಿದ್ದ ಕೂಗಿಗೆ ಸಿಎಂ ಯಡಿಯೂರಪ್ಪ ಅಸ್ತು ಎಂದಿದ್ದಾರೆ.
ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸಮಾಜದ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ, ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಅಗತ್ಯವಿರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ನಿಗಮವನ್ನು ಸ್ಥಾಪನೆ ಮಾಡಲು ಆದೇಶಿಸಿದೆ ಎಂದು ಪತ್ರ ಬರೆದಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

