ಕೋವಿಡ್-19 ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಆರ್.ಅಶೋಕ ಅವರಿಂದ ಚಾಲನೆ

ಬೆಂಗಳೂರು: ಕೋವಿಡ್-19 ವೈರಸ್‌ನ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ/ ಮುಂಜಾಗೃತಾ ಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಶ್ರವ್ಯ ಮತ್ತು ದೃಶ್ಯ ಮಾಧ್ಯಮದ ಮೂಲಕ ಬೃಹತ್ ಎಲ್.ಇ.ಡಿ. ಪರದೆ ಹೊಂದಿರುವ ಮೊಬೈಲ್ ವಾಹನದ ಮೂಲಕ ಪ್ರಚಾರ ಕಾರ್ಯಕ್ರಮಕ್ಕೆ ಇಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಕೋವಿಡ್-19 ತಡೆಗಟ್ಟುವಲ್ಲಿ ಸಾರ್ವಜನಿಕರು ಕೈಗೊಳ್ಳಬೇಕಾದ ಸುರಕ್ಷತಾ ಮುಂಜಾಗೃತಾ ಕ್ರಮಗಳ ಕುರಿತು ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸಲು ಶ್ರವ್ಯ-ದೃಶ್ಯ ಮಾಧ್ಯಮದ ಮೂಲಕ ಬೃಹತ್ ಎಲ್.ಇ.ಡಿ ಪರದೆ ಹೊಂದಿರುವ ಮೊಬೈಲ್ ವಾಹನಗಳನ್ನು ಬಳಸಿಕೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸಾರ್ವಜನಿಕರ ಹಿತದೃಷ್ಟಿಯಿಂದ ನಡೆಸುತ್ತಿರುವ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕರ್ನಾಟಕ ಸರ್ಕಾರವು ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಎಲ್.ಇ.ಡಿ  ವಾಹನಗಳಿಂದ ಕೋವಿಡ್-19 ಕುರಿತ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿನ 105 ಗ್ರಾಮ ಪಂಚಾಯತಿ ವ್ಯಾಪ್ತಿಯ 180 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ ತಲಾ 45 ಗ್ರಾಮಗಳಂತೆ, ಪ್ರತಿ ಗ್ರಾಮ ಪಂಚಾಯತಿಯಲ್ಲಿ 2 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಪ್ರತಿ ಗ್ರಾಮ ಪಂಚಾಯತಿಗಳ ತಲಾ ಎರಡು ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು, ಪ್ರತಿದಿನ 10 ಗ್ರಾಮಗಳಲ್ಲಿ ಕೋವಿಡ್-19 ಕುರಿತು ಜಾಗೃತಿ ಮೂಡಿಸಲಾಗುವುದು.18 ದಿನಗಳ ಜಾಗೃತಿ ಕಾರ್ಯಕ್ರಮ ಇದಾಗಿದ್ದು, ಜಿಲ್ಲೆಯಲ್ಲಿ 2 ಎಲ್.ಇ.ಡಿ ವಾಹನಗಳ ಸಂಚರಿಸಲಿದ್ದು, ಪ್ರತಿದಿನ ತಲಾ 5 ಗ್ರಾಮಗಳಂತೆ ಎರಡು ವಾಹನಗಳಿಂದ 10 ಗ್ರಾಮಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಕನ್ಯಾಕುಮಾರಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ವೆಂಕಟರಮಣಯ್ಯ, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರವಿ.ಡಿ.ಚನ್ನಣ್ಣನವರ್, ಜಿ.ಪಂ.ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್.ಎಂ.ನಾಗರಾಜು, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ಸಹಾಯಕ ನಿರ್ದೇಶಕಿ ಹೇಮಾವತಿ.ಜೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹರಿತಲೇಖನಿ ಫೇಸ್ಬುಕ್, ಟ್ವಿಟರ್ ಲೈಕ್ ಮಾಡಿ, ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!