ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಸರ್ಕಾರಿ ಕಾಲೇಜುಗಳು ಮಂಗಳವಾರದಿಂದ ಆರಂಭವಾದ ಬೆನ್ನಲ್ಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾಲೇಜುಗಳು ತೆರೆಯುವ ಸಿದ್ಧತೆ ಭರದಿಂದ ನಡೆಸುತ್ತಿದ್ದು, ನಗರದ ಆರ್.ಎಲ್.ಜಾಲಪ್ಪ ಕಾಲೇಜಿನಲ್ಲಿ ಆವರಣದಲ್ಲಿ ಸಿದ್ದತೆ ಕಾರ್ಯ ತೀವ್ರಗತಿಯಲ್ಲಿ ನಡೆಸಲಾಗುತ್ತಿದೆ.
ಈ ಕುರಿತು ಆರ್.ಎಲ್.ಜಾಲಪ್ಪ ಸಮೂಹ ಸಂಸ್ಥೆಯ ನಿರ್ದೇಶಕ ಜೆ.ರಾಜೇಂದ್ರ ಹರಿತಲೇಖನಿಗೆ ಮಾಹಿತಿ ನೀಡಿ, ಸರ್ಕಾರ ಹಾಗೂ ಜಿಲ್ಲಾಡಳಿತದ ಆದೇಶದ ಮೇರೆಗೆ ಕಾಲೇಜುಗಳನ್ನು ಆರಂಭಿಸಲು ಸಿದ್ದತೆ ನಡೆಸಲಾಗುತ್ತಿದೆ. ಕೋವಿಡ್-19 ಮುಂಜಾಗ್ರತೆಯ ಕ್ರಮವಾಗಿ ಹಾಗೂ ವಿಧ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕೊಠಡಿ, ಮೇಜು, ಕುರ್ಚಿ ಸೇರಿದಂತೆ ಎಲ್ಲಾ ಪರಿಕರಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿಸಲಾಗುತ್ತಿದೆ. ಅಲ್ಲದೆ ವಿದ್ಯಾರ್ಥಿಗಳು, ಸಿಬ್ಬಂದಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀನಿವಾಸ್ ರೆಡ್ಡಿ ಮಾತನಾಡಿ, ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಆರ್.ಎಲ್.ಜಾಲಪ್ಪ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಗೆ ನ.23 ರಿಂದ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಕಾಲೇಜ್‌ಗೆ ಹಾಜರಾಗಬಹುದೆಂದು ಮನವಿ ಮಾಡಿದ್ದಾರೆ.
ಈ ವೇಳೆ ಆರ್.ಎಲ್.ಜಾಲಪ್ಪ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ನರಸಿಂಹ ರೆಡ್ಡಿ, ಪ್ಲೇಸ್ ಮೆಂಟ್ ಆಫೀಸರ್ ಬಾಬು ರೆಡ್ಡಿ, ಎಇಇ ರಮೇಶ್ ಕುಮಾರ್ ಮತ್ತಿತರಿದ್ದರು.
ಹರಿತಲೇಖನಿ ಫೇಸ್ಬುಕ್, ಟ್ವಿಟರ್ ಲೈಕ್ ಮಾಡಿ, ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ