ಬೆಂಗಳೂರು: ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣ ಬೆಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳು ನಗರದ 43 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ವಿವಿಧೆಡೆಯ ನಾಲ್ಕು SDPI ಕಚೇರಿ ಮತ್ತು PFI ಕಚೇರಿ ಮೇಲೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು SDPI ಮತ್ತು PFI ಗೆ ಸೇರಿದ ವಸ್ತುಗಳು ವಶಕ್ಕೆ ಪಡೆದಿದ್ದಾರೆ. ದಾಳಿಯ ಕೆಲವು ಸ್ಥಳಗಳಲ್ಲಿ ಚಾಕು, ಕಬ್ಬಿಣದ ರಾಡ್ ಸೇರಿ ಆಯುಧಗಳು ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.
ಇಂದು ನಗರದ 43 ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಿ ಶೋಧ ನಡೆಸಿದ ಎನ್ಐಎ, 4 ಕಡೆ ಎಸ್.ಡಿ.ಪಿ.ಐ ಕಚೇರಿಯಲ್ಲಿ ತಪಾಸಣೆ ನಡೆಸಿದೆ. ಈ ವೇಳೆ ಹಲವಾರು ಮಹತ್ವದ ದಾಖಲೆಗಳು, ಕೆಲವು ಕಡೆ ಮಾರಕಾಸ್ತ್ರಗಳು ಜಪ್ತಿ ಮಾಡಲಾಗಿದೆ ಎಂದು ವರದಿಯಾಗಿದೆ.
ಹರಿತಲೇಖನಿ ಫೇಸ್ಬುಕ್, ಟ್ವಿಟರ್ ಲೈಕ್ ಮಾಡಿ, ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ