ತುಘಲಕ್ ಸರ್ಕಾರ, ನಿಗಮ ಪ್ರಾಧಿಕಾರ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ನಿಗಮ ಪ್ರಾಧಿಕಾರದ ರಚನೆ ಕುರಿತಾದ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತುಘಲಕ್ ಸರ್ಕಾರ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡ ಹೌದು. ಚುನಾವಣೆಗಳನ್ನು ಸಾಧನೆಯ ಬಲದಿಂದ ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ ಇಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ ಎಂದಿದ್ದಾರೆ.

ಬಡತನ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು. ಮುಖ್ಯಮಂತ್ರಿಗಳು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ. 

ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಜಾತಿ-ಧರ್ಮಗಳನ್ನು ಮೀರಿದ್ದು ಬಡತನ. ತಳಸಮುದಾಯಗಳಲ್ಲಿ ಮಾತ್ರವಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ನಾನು ಸ್ವಾಗತಿಸುತ್ತೇನೆ. ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲ್ಲಕ ಬುದ್ದಿಯ ಕಸರತ್ತುಗಳನ್ನು ಖಂಡಿಸುತ್ತೇನೆ. 

ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯಾದ್ಯಂತ ಎರಡೂ ಸಮುದಾಯಗಳು ಸೌಹಾರ್ದತೆಯಿಂದ ಬದುಕುತ್ತಿವೆ. ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆಯಾಗಲಿದ್ದಾರೆ.

ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳು ನಿರ್ದಿಷ್ಠ ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಾಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ನಾನು ಜಾತಿ-ಜಾತಿ ನಡುವೆ ವೈಷಮ್ಯ ಹುಟ್ಟಿಸುವ ಕೆಲಸ ಮಾಡಿಲ್ಲ. 

ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ.

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೋರೊನಾ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣ ಇಲ್ಲ, ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ್ದಾರೆ.

ಹರಿತಲೇಖನಿ ಫೇಸ್ಬುಕ್, ಟ್ವಿಟರ್ ಲೈಕ್ ಮಾಡಿ, ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!