ದೊಡ್ಡಬಳ್ಳಾಪುರ: ಕರೊನಾ ಲಾಕ್‌ಡೌನ್‌ನಿಂದಾಗಿ ಕಳೆದ ಏಳು ತಿಂಗಳಿಂದ ಬಂದ್ ಆಗಿದ್ದ ಕಾಲೇಜುಗಳಲ್ಲಿ ಇಂದಿನಿಂದ ತರಗತಿಗಳು ಆರಂಭವಾಗಿದೆ.
ಮೊದಲ ದಿನವಾದ ಮಂಗಳವಾರ ವಿದ್ಯಾರ್ಥಿಗಳಿಗೆ ಕೋವಿಡ್-19 ಪರೀಕ್ಷೆ ಮಾಡಿಸಲಾಗಿದ್ದು ಯಾರಿಗೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶೇ.60 ಹಾಜರಾತಿ: ನಗರದ ಮಾದಗೊಂಡನಹಳ್ಳಿ ರಸ್ತೆಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶೇ.60 ರಷ್ಟು ವಿದ್ಯಾರ್ಥಿಗಳು ಈಗಾಗಲೇ ಹಾಜರಾಗಿದ್ದು, ತರಗತಿಗಳನ್ನುಆರಂಭಿಸಲಾಗಿದೆ ಎಂದು ಪ್ರಾಂಶುಪಾಲರಾದ ಶ್ರೀನಿವಾಸಯ್ಯ ಹರಿತಲೇಖನಿಗೆ ತಿಳಿಸಿದ್ದಾರೆ.
ಮಹಿಳಾ ಕಾಲೇಜಿಗೆ ಶೇ.72 ಹಾಜರಾತಿ: ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಎರಡನೇ ದಿನವಾದ ಇಂದು ಶೇ.72ರಷ್ಟು ವಿದ್ಯಾರ್ಥಿನಿಯರು ಹಾಜರಾಗಿದ್ದು, ತರಗತಿಗಳು ಆರಂಭಿಸಲಾಗಿದೆ ಎಂದು ಡಾ.ಭಾರತಿ ಶ್ಯಾಮರಾಜ್ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್, ಟ್ವಿಟರ್ ಲೈಕ್, ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ