ಬೆಂಗಳೂರು: ಗ್ರಾಮಾಂತರ ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಯುವಜನ ಮೇಳ ಮತ್ತು ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಭಾಗವಹಿಸುವ ಯುವಕ-ಯುವತಿಯರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ಅಗತ್ಯವಿರುವ ಜಾನಪದ ಪರಿಕರ ಮತ್ತು ಉಡುಪುಗಳನ್ನು ನೀಡಲು ಯೋಜಿಸಲಾಗಿದ್ದು, ಅರ್ಹ ಯುವಕ-ಯುವತಿ/ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು: ಯುವಕ-ಯುವತಿ ಸಂಘ ಸಂಸ್ಥೆಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೊಂದಣಿ/ನವೀಕರಣ ಹೊಂದಿರಬೇಕು, ಅರ್ಜಿಯೊಂದಿಗೆ ನೋಂದಣಿ ಪ್ರಮಾಣ ಪತ್ರವನ್ನು ಲಗತ್ತಿಸಬೇಕು, ನಿರಂತರವಾಗಿ ಇಲಾಖೆಯು ನಡೆಸುವ ಯುವಜನೋತ್ಸವ ಮತ್ತು ಯುವಜನ ಮೇಳಗಳಲ್ಲಿ ಭಾಗವಹಿಸಿರುವ ಬಗ್ಗೆ ಪ್ರಮಾಣ ಪತ್ರವನ್ನು ಲಗತ್ತಿಸಬೇಕು, ಅರ್ಜಿಯನ್ನು ಸಲ್ಲಿಸುವ ಸಂಘ ಸಂಸ್ಥೆಗಳು/ಯುವಕ-ಯುವತಿಯರು ಅಗತ್ಯವಿರುವ ಜಾನಪದ ಪರಿಕರ/ಉಡುಪುಗಳ ವಿವರಗಳನ್ನು ಒದಗಿಸುವುದು.
ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 2020ರ ನವೆಂಬರ್ 26 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.:9845608598 ಹಾಗೂ ದೂ.ಸಂ.: 08029787443 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್, ಟ್ವಿಟರ್ ಲೈಕ್ ಮಾಡಿ, ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

