ಬೆಂಗಳೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ “ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber etc, Amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು ಮನೆ ಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಎ ಮತ್ತು 3ಬಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ನೀಡಲಾಗುವ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಉದ್ಯೋಗಕ್ಕಾಗಿ ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ.25000/-ಗಳ ಸಹಾಯ ಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯುವುದು. ಈ ಸೌಲಭ್ಯ ಪಡೆಯಲು ಬಯಸುವವರು
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಲಾಗುವುದು.
ಈ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಸಿಸುತ್ತಿರುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ನಿಗಮದ ವೆಬ್ಸೈಟ್ www.dbcdc.Karnataka.gov.in ಇಲ್ಲಿ ಅರ್ಜಿಗಳನ್ನು ಪಡೆಯುವುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಸಲ್ಲಿಸಲು 2020ರ ಡಿಸೆಂಬರ್ 19 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ ನಿಯಮಿತ, ಕೊಠಡಿ ಸಂಖ್ಯೆ: 8, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ನಿಗಮದ ದೂರವಾಣಿ ಸಂಖ್ಯೆ: 080-29605761 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ ನಿಯಮಿತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕಿ ಎನ್. ಸುಜಾತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್, ಟ್ವಿಟರ್ ಲೈಕ್ ಮಾಡಿ, ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

