ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 34 ಜನರಿಗೆ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಓರ್ವ ವ್ಯಕ್ತಿ ಸಾವನಪ್ಪಿದ್ದಾರೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಶುಕ್ರವಾರದ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ 21 ಪುರುಷರು ಮತ್ತು 13 ಮಹಿಳೆಯರಿಗೆ ಸೋಂಕು ದೃಢಪಟ್ಟಿದೆ.
ತಾಲೂಕು ಆರೋಗ್ಯ ಇಲಾಖೆಯ ಮೂಲಗಳು ಹರಿತಲೇಖನಿ ನೀಡಿರುವ ಮಾಹಿತಿಯ ಅನ್ವಯ ಆಕಾಶ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಲ್ಲತ್ ಹಳ್ಳಿ ಗ್ರಾಮದ 67 ವರ್ಷದ ಪುರುಷ ಸಾವನಪ್ಪಿದ್ದಾರೆ.
ಪ್ರಸ್ತುತ ತಾಲೂಕಿನಲ್ಲಿ 4550 ಮಂದಿಗೆ ಕರೊನಾ ಸೋಂಕು ತಗುಲಿದ್ದು 4400 ಜನ ಗುಣಮುಖರಾಗಿದ್ದರೆ, ಸಕ್ರಿಯ ಕರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ 150 ಆಗಿದೆ.
ಉಳಿದಂತೆ ಸೋಂಕಿಗೆ ಒಳಗಾದ 44 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 106 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

