ಬೆಂಗಳೂರು: ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ಮೊದಲ ದಿನವೆ ವಿ.ಪ್ರಸಾದ್ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳು, ನೌಕರರು ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿದ್ದಾರೆ.
ಇಂದು ಮದ್ಯಾಹ್ನವಷ್ಟೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿ, ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ,ನೌಕರರು ,ಮತ್ತು ಸಿಬ್ಬಂದಿ ವರ್ಗದವರ ಸಭೆ ನೆಡಸಿ ಜನ ಸಂಪರ್ಕ ಇಲಾಖೆಯೇ ಜಿಲ್ಲಾ ಪಂಚಾಯಿತಿ. ಜಿಲ್ಲೆಯ ಜನರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಅಧಿಕಾರಿಗಳ ಸಹಕಾರ ಅಗತ್ಯವಾಗಿದ್ದು ಎಲ್ಲರೂ ಒಟ್ಟಾಗು ಸೇರಿ ಶ್ರಮಿಸೋಣ ಎಂದು ಹೇಳಿದ್ದಾರೆ.
ಕೋವಿಡ್ -19 ರಿಂದ ಅಭಿವೃದ್ಧಿ ಕಾರ್ಯಗಳು ಜಿಲ್ಲೆಯಲ್ಲಿ ಕುಂಟಿತಗೊಂಡಿದ್ದು, ಅವುಗಳಿಗೆ ಶೀಘ್ರವಾಗಿ ಚಾಲನೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದಿರುವ ಅವರು, ಬರಲಿರುವ ಬೇಸಿಗೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಶ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಜಿಲ್ಲಾ ಉಪಕಾರ್ಯದರ್ಶಿ ಕೆ.ಕರಿಯಪ್ಪ ಮತ್ತಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

