ಬೆಂಗಳೂರು: ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್ ನೂತನ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾದ ಚಂದ್ರಕಲಾ ಮಂಜುನಾಥ್, ಪದ್ಮನಾಭನಗರದ ನಿವಾಸದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮನೆಗೌಡ ನೇತೃತ್ವದಲ್ಲಿ ಜೆಡಿಎಸ್ ವರಿಷ್ಠರಾದ ದೇವೆಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿಯಾದ ಅವರು ಮಾತುಕತೆ ನಡೆಸಿದರು.
ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ನಗರ ಅಧ್ಯಕ್ಷ ವಡ್ಡರಹಳ್ಳಿ ರವಿಕುಮಾರ್, ಎಪಿಎಂಸಿ ನಿರ್ದೇಶಕ ಲೋಕೇಶ್, ಟಿಎಪಿಎಂಸಿಎಸ್ ಸದಸ್ಯರಾದ ಕೆ.ಸಿ.ಲಕ್ಷ್ಮೀನಾರಾಯಣ್, ವಿ.ಅಂಜನಗೌಡ, ಗೋವಿಂದರಾಜ್, ಲಕ್ಷ್ಮೀನಾಗೇಶ್ ಮತ್ತಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

