ಬೆಂಗಳೂರು: ರಾಜ್ಯದಲ್ಲಿ ಕರೊನಾ ವೈರಸ್ ಮತ್ತೆ ಹರಡುತ್ತಿದ್ದು, ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ತಜ್ಞರು ವರದಿ ಸಲ್ಲಿಸಿರುವ ಹಿನ್ನೆಲೆ ಡಿಸೆಂಬರ್ ತಿಂಗಳಲ್ಲಿ ಯಾವುದೇ ಶಾಲೆ, ಪದವಿ ಪೂರ್ವ ಕಾಲೇಜು ತೆರೆಯುವುದಿಲ್ಲವೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಾಲೆಗಳ ಆರಂಭದ ಕುರಿತು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಜ್ಞರು ಡಿಸೆಂಬರ್ ತಿಂಗಳಲ್ಲಿ ಚಳಿಯ ಕಾರಣ ಸೋಂಕು ವ್ಯಾಪಿಸುವ ಸಾಧ್ಯತೆ ಇದೆ.ಅಲ್ಲದೆ ಎರಡನೇ ಸುತ್ತಿನ ಸೋಕು ಹರಡುವ ಆತಂಕ ಇರುವ ಕಾರಣ ಡಿಸೆಂಬರ್ ತಿಂಗಳಲ್ಲಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು ಆರಂಭಿಸದಂತೆ ತೀರ್ಮಾನಿಸಲಾಗಿದೆ.
ಮುಂದಿನ ಹಂತವಾಗಿ ಡಿಸೆಂಬರ್ ಮೂರನೆ ವಾರದಲ್ಲಿ ಮತ್ತೆ ಸಭೆ ನಡೆಸಿ ಆಗಿನ ಸ್ಥಿತಿ ಗಮನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಗಳು ಇಲ್ಲದ ಕಾರಣ ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ದತಿ ಹೆಚ್ಚುತ್ತಿರುವ ಆತಂಕ ಹೆಚ್ಚಾಗಿದ್ದರು, ಜೀವ ಮುಖ್ಯವಾದ ಕಾರಣ ಅನಿರ್ವಾರ್ಯವಾಗಿ ಶಾಲೆಗಳನ್ನು ತೆರೆಯುತ್ತಿಲ್ಲ ಎಂದರು.
ಸಂವೇದ ಮೂಲಕ ಹತ್ತನೆ ತರಗತಿ ಪಠ್ಯಗಳು ಪೂರ್ಣಗೊಳ್ಳುತ್ತಿದ್ದು, ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸಲು ಕೆಲವೆ ದಿನಗಳಲ್ಲಿ ದಿನಾಂಕ ಘೋಷಣೆ ಮಾಡಲಾಗುವುದೆಂದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

