ಅಪರಾಧ ರಹಿತ ಕಾನೂನು ಸುವ್ಯವಸ್ಥೆ ಸರ್ಕಾರದ ಜವಬ್ದಾರಿ: ಸಿಎಂ ಬಿ.ಎಸ್.ಯಡಿಯೂರಪ್ಪ

ಮೈಸೂರು: ಸಮಾಜದಲ್ಲಿ ಸಾರ್ವಜನಿಕರು ಯಾವುದೇ ಭೀತಿಯಿಲ್ಲದೆ ಶಾಂತಿಯಿಂದ ನೆಲೆಸುವುದಕ್ಕೆ ಅಪರಾಧ ರಹಿತವಾದ, ಉತ್ತಮ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಲ್ಪಿಸುವಂಥದ್ದು ಸರ್ಕಾರದ ಜವಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಹೇಳಿದರು.

ಮಂಗಳವಾರ ಮೈಸೂರು ನಗರದ ಪೊಲೀಸ್ ಆಯುಕ್ತರ ನೂತನ ಕಚೇರಿ ಹಾಗೂ ಪೊಲೀಸ್ ಗೃಹ-2020 ಯೋಜನೆಯಡಿ ನಿರ್ಮಿಸಿರುವ 108 ವಸತಿ ಗೃಹಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಶಾಂತಿ ಕಾಪಾಡಲು ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ತರವಾಗಿದೆ. ಮೈಸೂರು ನಗರದ ಪೊಲೀಸರಿಂದ ಅತ್ಯಂತ ಜನಪರವಾದ, ಗುಣಾತ್ಮಕ, ವೃತ್ತಿಪರ, ಪಾರದರ್ಶಕ ಹಾಗೂ ಜವಬ್ದಾರಿಯುತವಾದ ಕೆಲಸವನ್ನು ಸರ್ಕಾರ ನಿರೀಕ್ಷಿಸುತ್ತಿದೆ ಎಂದರು.

ಮೈಸೂರು ನಗರ ಪೊಲೀಸರ ಕಾರ್ಯಕ್ಷಮತೆಯನ್ನು ವೃದ್ಧಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಮೂಲಭೂತ ಸೌಲಭ್ಯಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಪೊಲೀಸರು ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸುಸಜ್ಜಿತ ಹಾಗೂ ಮೂಲಭೂತ ಸೌಕರ್ಯದಿಂದ ಕೂಡಿದ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ನಿಗಮ ಮೂಲಕ ನೂತನವಾದ ಆಧುನಿಕ ವಿನ್ಯಾಸದ ವಸತಿ ಗೃಹವನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗುತ್ತಿದೆ. ಮೈಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜ್ಯೋತಿ ನಗರದಲ್ಲಿ 37 ಹಾಗೂ ಜಾಕಿ ಕ್ವ್ಯಾಟ್ರಾಸ್‌ನ 72ವಸತಿ ಗೃಹಗಳು ಎಲ್ಲಾ ಮೂಲಭೂತ ಸೌಕರ್ಯದಿಂದ ಕೂಡಿದೆ. ಪೊಲೀಸ್ ಗೃಹ 2020 ಯೋಜನೆಯಡಿ ಈ ವಸತಿ ಸಮುಚ್ಚಯ ನಿರ್ಮಾಣಕ್ಕೆ 20.31 ಕೋಟಿ ರೂ. ವೆಚ್ಚವನ್ನು ಮಾಡಲಾಗಿದೆ ಎಂದರು.

ಪೊಲೀಸ್ ಗೃಹ-2025ನೇ ಯೋಜನೆಯಡಿ 184 ವಸತಿಗೃಹಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಪ್ರಸ್ತುತ ಕಾಲದಲ್ಲಿ ಪೊಲೀಸ್ ಸಿಬ್ಬಂಧಿ ಅಧಿಕಾರಿಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಪೊಲೀಸ್ ವಸತಿಗೃಹಗಳಲ್ಲಿ ಸ್ಥಳಾವಕಾಶದ ಕೊರತೆ ಇರುವುದನ್ನು ಸರ್ಕಾರ ಮನಗಂಡು ಈ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಕೋವಿಡ್-19 ಸಾಂಕ್ರಾಮಿಕದ ನಿಯಂತ್ರಣದಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಹೆಚ್ಚಿನ ಜವಬ್ದಾರಿಯಿಂದ ಕಾರ್ಯನಿರ್ವಹಿಸಿರುವ ಪ್ರಶಂಸನಾ ಕಾರ್ಯವನ್ನು ವೈಯಕ್ತಿಕವಾಗಿ ಅಭಿನಂದಿಸುತ್ತೇನೆ.

ಕೊರೊನಾ ಸೋಂಕಿನ ಹರಡುವಿಕೆಯ ಸಂದರ್ಭದಲ್ಲಿ ಸಾರ್ವಜನಿಕರಿಕೆ ಅರಿವು ಮೂಡಿಸುವಲ್ಲಿ ಹಾಗೂ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ ಮೈಸೂರು ನಗರ ಪೊಲೀಸರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಎಂಬುದನ್ನು ದೇಶದ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಚರ್ಚಿಸಿದ್ದಾರೆ. ಇನ್ನೂ ನಾಲ್ಕೈದು ವಾರಗಳ ಕಾಲ ಕಟ್ಟೆಚ್ಚರ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ ಎಂದರು.

ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯ ಪೊಲೀಸ್ ಇಲಾಖೆಯು ದೇಶದಲ್ಲಿ ಅತ್ಯಂತ ದಕ್ಷತೆ ಹಾಗೂ ನಿಷ್ಠೆಗೆ ಹೆಸರುವಾಸಿಯಾಗಿದೆ. ಅದರಂತೆ ಮೈಸೂರಿನಲ್ಲಿ ಇಲಾಖೆಯು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಮೈಸೂರಿನ ಪೊಲೀಸ್ ಇಲಾಖೆಯು ಕೋವಿಡ್-19 ಹಿನ್ನೆಲೆ ಜಾರಿಯಾದ ಲಾಕ್‌ಡೌನ್ ಸಂದರ್ಭದಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದೆ. ಅದರಂತೆ ಜಿಲ್ಲೆಯ ಜನರ ಸಹಕಾರವು ಉತ್ತಮವಾಗಿದೆ. ಇದರಿಂದಾಗಿ ಸಾಂಸ್ಕೃತಿಕ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಅಭಿವೃದ್ಧಿ ನಿರಂತರವಾಗಿ ನಡೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಎಸ್.ಟಿ.ಸೊಮಶೇಖರ್, ಶಾಸಕರಾದ ಎಸ್.ಎ.ರಾಮದಾಸ್, ಸಂಸದ ಪ್ರತಾಪ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಅಡಗೂರು ಎಚ್.ವಿಶ್ವನಾಥ್, ಕೆ.ಟಿ.ಶ್ರೀಕಂಠೇಗೌಡ,  ಕೆ.ಮಹದೇವ್, ಎಲ್ ನಾಗೇಂದ್ರ, ಬಿ.ಹರ್ಷವರ್ಧನ್, ಮುಡಾ ಅಧ್ಯಕ್ಷರಾದ ಎಚ್.ವಿ.ರಾಜೀವ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಪ್ರವೀಣ್ ಸೂದ್, ನಗರ ಪೋಲಿಸ್ ಆಯುಕ್ತರಾದ ಡಾ.ಚಂದ್ರಗುಪ್ತ, ನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಮೇಯರ್ ತಸ್ನೀಂ, ಜಿಲ್ಲಾಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಂ  ಇನ್ನಿತರರು ಉಪಸ್ಥಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]