ದೊಡ್ಡಬಳ್ಳಾಪುರ: ಸನ್ಮಾನಗಳು, ಅಭಿನಂದನೆಗಳು, ಪುರಸ್ಕಾರಗಳು, ಸನ್ಮಾನಿತರ ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ಹೆಚ್ಚಿಸುತ್ತದೆ ಎಂದು ತಾಲ್ಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿಗೆ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಎಸ್.ದಯಾನಂದ ಹೇಳಿದರು.
ಅವರು ವೀರಶೈವ ಸಮಾಜ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ನನ್ನ ಗೆಲುವಿಗೆ ವೀರಶೈವ ಸಮಾಜದ ಮುಖಂಡರ ಶ್ರಮವೂ ಜಾಸ್ತಿ ಇದೆ. ಸಾರ್ವಜನಿಕ ಜೀವನದಲ್ಲಿ ನಾವು ಎಲ್ಲ ಜನಾಂಗದ ಪ್ರೀತಿ ವಿಶ್ವಾಸ ಗಳಿಸಿ ಎಲ್ಲರಿಗೂ ನಮ್ಮ ಕೈಯಲ್ಲಾದ ಸಹಾಯವನ್ನು ಮಾಡಬೇಕು, ಅಧಿಕಾರ ಪಡೆದ ಮೇಲೆ ಸೇವೆಯನ್ನು ಮಾಡಬೇಕು ಈ ನಿಟ್ಟಿನಲ್ಲಿ ನಿಮ್ಮೆಲ್ಲರ ಸಲಹೆ ಸಹಕಾರ ಪಡೆದು ಸೇವೆಯನ್ನು ಮಾಡುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿಗೆ ಸರ್ಕಾರದ ನಾಮನಿರ್ದೇಶನ ನಿರ್ದೇಶಕರಾದ ಕನ್ನಮಂಗಲದ ಸಿದ್ದರಾಮಣ್ಣ ಅವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಸೋಮರುದ್ರ ಶರ್ಮ ವೀರಶೈವ ಲಿಂಗಾಯಿತ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪುಟ್ಟ ಬಸವರಾಜು ವೀರಶೈವ ಮಹಾಸಭಾದ ನಿಕಟಪೂರ್ವ ತಾಲೂಕ್ ಅಧ್ಯಕ್ಷ ವಿಶ್ವನಾಥ್ ಶರಣ ಸಾಹಿತ್ಯ ಪರಿಷತ್ ತಾಲೂಕ್ ಅಧ್ಯಕ್ಷ ಕೆ ಮಹಾಲಿಂಗಯ್ಯ ಕರವೇ ಅಧ್ಯಕ್ಷ ಚಂದ್ರಶೇಖರ್ ಮುತ್ತಣ್ಣ ಹಾಗೂ ವೀರಶೈವ ನೌಕರರ ಸಂಘದ ಅಧ್ಯಕ್ಷ ಜಯಣ್ಣ ನಿವೃತ್ತ ಶಿಕ್ಷಕ ಮಂಜುನಾಥ್ ಮತ್ತಿತರು ಇದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

