ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ: ಡಿ.ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಸದಾಶಿವನಗರ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ರಾಜಕೀಯ ದ್ವೇಷದಿಂದ ನನ್ನ ವಿರುದ್ಧ ಸಿಬಿಐ ವಿಚಾರಣೆ ನಡೆಸಲಾಗುತ್ತಿದೆ. ನಾನು ಮಾಡಬಾರದ ಕೆಲಸ ಮಾಡಿಲ್ಲ. ಹೀಗಾಗಿ ಹೆದರುವ ಅಗತ್ಯವಿಲ್ಲ. ನಾನು ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ ನೀಡಿದ್ದಾರೆ. ಇದುವರೆಗೂ ಯಾರ ಮೇಲೆ ಈ ರೀತಿ ತನಿಖೆ ಮಾಡಿಸಿದ್ದಾರೆ? ರಾಜ್ಯದಲ್ಲಿ ನಾನೊಬ್ಬನೇ ಆಸ್ತಿ ಸಂಪಾದಿಸಿದ್ದೇನಾ? ನನ್ನ ಮೇಲೆ ಯಾವುದಾದರೂ ದೂರು ದಾಖಲಾಗಿದೆಯಾ? ಯಾವುದಾದರೂ ಆರೋಪ ಸಾಬೀತಾಗಿದೆಯಾ? ಯಾರ ಬಳಿಯಾದರೂ ನಾನು ಲಂಚ ಪಡೆದಿದ್ದೇನಾ? ಅಧಿಕಾರ ದುರುಪಯೋಗ ಮಾಡಿಕೊಂಡಿದ್ದೇನಾ? ಇಂಧನ ಸಚಿವ ಆಗಿದ್ದಾಗ ಅಕ್ರಮ ಮಾಡಿದ್ದೇನಾ? ಯಡಿಯೂರಪ್ಪನವರೇ ಅಧಿಕಾರದಲ್ಲಿದ್ದಾರೆ. ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಲಿ. ಅದನ್ನು ಬಿಟ್ಟು ಸಿಬಿಐಗೆ ಕೊಡುವ ಅಗತ್ಯ ಏನಿತ್ತು?’ ಎಂದು ಪ್ರಶ್ನಿಸಿದರು.

‘ಇದೊಂದು ತನಿಖೆ ಮಾಡುವ ಪ್ರಕರಣವಲ್ಲ ಎಂದು ಅಡ್ವೊಕೇಟ್ ಜನರಲ್ ಅವರೇ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿರುವ ಎಸಿಬಿಯಿಂದಲೇ ವಿಚಾರಣೆ ನಡೆಸಬಹುದು ಎಂದು ತಿಳಿದ್ದಾರೆ. ಆದರೂ ಸರ್ಕಾರದ ಒತ್ತಡದ ಮೇಲೆ ಈ ವಿಚಾರಣೆ ನಡೆಯುತ್ತಿದೆ’ ಎಂದು ದೂರಿದರು.

ಅಧಿಕಾರಿಗಳ ಕಾರ್ಯ ಪ್ರಶ್ನಿಸುವುದಿಲ್ಲ: ನಾನು ಸಿಬಿಐ ಅಧಿಕಾರಿಗಳ ತನಿಖಾ ವ್ಯವಸ್ಥೆ ಪ್ರಶ್ನಿಸುವುದಿಲ್ಲ. ಅವರು ನಮಗೆ ಯಾವುದೇ ರೀತಿಯ ತೊಂದರೆ ನೀಡುತ್ತಿಲ್ಲ. ಅವರು ಅವರ ಕರ್ತವ್ಯ ಮಾಡುತ್ತಿದ್ದಾರೆ. ಅವರ ಕಾರ್ಯವೈಖರಿ ಕೈಪಿಡಿ ನಾನು ಓದಿದ್ದೇನೆ. 48 ದಿನ ನಾನು ಈ ಕುರಿತ ಪುಸ್ತಕಗಳನ್ನು ಓದಿದ್ದೇನೆ. ಅವರಿಗೆ ಬರುವ ಮಾರ್ಗದರ್ಶನದಂತೆ ಅವರು ಕೆಲಸ ಮಾಡುತ್ತಿದ್ದಾರೆ. ಅವರನ್ನು ನಾನು ದೂರುವುದಿಲ್ಲ. 

ಸಿಬಿಐ ಅಧಿಕಾರಿಗಳು 23 ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ಆದರೆ 23 ರಂದು ಮಸ್ಕಿ ಪ್ರವಾಸ ಪೂರ್ವನಿಗದಿಯಾಗಿದ್ದ ಹಿನ್ನೆಲೆಯಲ್ಲಿ, 25 ರಂದು ವಿಚಾರಣೆಗೆ ಹಾಜರಾಗುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದೆ. ಇವತ್ತು ವಿಚಾರಣೆಗೆ ಹಾಜರಾಗುತ್ತೇನೆ. ನಾನು ವಿಚಾರಣೆಗೆ ಹಾಜರಾಗುತ್ತೇನೆ ಎಂದ ಮೇಲೆ ಅದರಿಂದ ತಪ್ಪಿಸಿಕೊಳ್ಳುವುದಿಲ್ಲ. ನಾನು ಇ.ಡಿ. ಸೇರಿದಂತೆ ಎಲ್ಲ ತನಿಖಾ ಸಂಸ್ಥೆ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಾ ಬಂದಿದ್ದೇನೆ. ನಾನು 4 ಗಂಟೆಗೆ ಹಾಜರಾಗುವುದಾಗಿ ತಿಳಿಸಿದ್ದೇನೆ. ಸಾಧ್ಯವಾದರೆ ಅರ್ಧ ಗಂಟೆ ಮುಂಚಿತವಾಗಿ ಹಾಜರಾಗುತ್ತೇನೆ.

ಸಿಬಿಐ ಕಚೇರಿ ಬಳಿ ಯಾರೂ ಬರಬೇಡಿ: ಈಗಾಗಲೇ ನಾನು ಮನವಿ ಮಾಡಿಕೊಂಡಿರುವಂತೆ, ನಾನು ವಿಚಾರಣೆಗೆ ಹಾಜರಾಗಲು ಸಿಬಿಐ ಕಚೇರಿಗೆ ಹೋದಾಗ ಯಾರು ಕೂಡ ಅಲ್ಲಿಗೆ ಬರಬಾರದು. ನಿಮಗೆ ಮುಜುಗರ ತರುವ ಯಾವುದೇ ಕೆಲಸ ನಾನು ಮಾಡಿಲ್ಲ. ನನಗೆ ಏನಾಗುತ್ತದೋ ಎಂಬ ಆತಂಕ ಬೇಡ. ಅಧಿಕಾರಿಗಳು ಅವರ ಕೆಲಸ ಮಾಡುತ್ತಾರೆ. ಅಲ್ಲಿಗೆ ಬಂದು ಯಾರ ವಿರುದ್ಧವೂ ಘೋಷಣೆ ಹಾಕುವುದು ಬೇಡ. ಪರಿಸ್ಥಿತಿ ಕೈಮೀರಿದರೆ ನಮಗೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ನಾನು ಸ್ನೇಹಿತರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಈ ಮನವಿ ಮಾಡಿಕೊಳ್ಳುತ್ತಿದ್ದೇನೆ.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]