ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕಾರ್ತಿಕ ಮಾಸ ಶುಕ್ಲಪಕ್ಷದ ದ್ವಾದಶಿಯಂದು, ತುಳಸಿ ಹಬ್ಬವನ್ನು ಮಹಿಳೆಯರು ಶ್ರದ್ಧಾಭಕ್ತಿಗಳಿಂದ ಆಚರಿಸಿದರು. ಇದರ ಅಂಗವಾಗಿ ಬೃಂದಾವನವನ್ನು ತಳಿರು ತೋರಣಗಳಿಂದ ವಿಶೇಷವಾಗಿ ಸಿಂಗರಿಸಿ, ಪೂಜೆ ಸಲ್ಲಿಸುತ್ತಿದ್ದ ದೃಶ್ಯ ವಿಶೇಷವಾಗಿತ್ತು.
ತುಳಸಿ ಗಿಡದೊಂದಿಗೆ ಬೆಟ್ಟದ ನಲ್ಲಿಕಾಯಿಯ ರೆಂಬೆಯನ್ನು ಇಟ್ಟು, ಕೃಷ್ಣನ ಮೂರ್ತಿ ಅಥವಾ ಫೋಟೋ ಪೂಜಿಸಿ ಮುತೈದೆಯರಿಗೆ ಹರಿಶಿಣ ಕುಂಕುಮ ನೀಡುವುದು ಈ ಆಚರಣೆಯ ವೈಶಿಷ್ಟ್ಯವಾಗಿದೆ. ಈ ಬಾರಿ ಕೋವಿಡ್ ಕಾರಣದಿಂದಾಗಿ ಬಹಳಷ್ಟು ಕಡೆಗಳಲ್ಲಿ ಸರಳವಾಗಿ ಆಚರಿಸಲಾಯಿತು.
ಹಿಂದೂಗಳ ಮನೆಯಲ್ಲಿ ಸಾಮಾನ್ಯವಾಗಿ ತುಳಸಿ ಗಿಡವಿರುವುದು ವಾಡಿಕೆಯಾಗಿದ್ದು, ತುಳಸಿ ಗಿಡ ಐಶ್ವರ್ಯವನ್ನೂ, ಸಂತಸವನ್ನೂ ತರುತ್ತದೆ. ಅಕಾಲಿಕ ಮರಣ ತಡೆಯುತ್ತದೆ ಎನ್ನುವ ನಂಬಿಕೆಯಿದೆ. ಆಯುರ್ವೇದದಲ್ಲಿ ಪ್ರಮುಖ ಔಷಧ ಸಸ್ಯವೂ ಆಗಿರುವುದು ತುಳಸಿಯ ಮಹತ್ವವನ್ನು ಸಾರುತ್ತದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

