ನವದೆಹಲಿ: ರಿಪಬ್ಲಿಕ್ ಚಾನಲ್ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಆತ್ಮಹತ್ಯೆ ಪ್ರಕರಣಕ್ಕೆ ‘ಪುನಃ ತೆರೆಯಲಾದ’ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ತನ್ನ ವಿವರವಾದ ಮಾಹಿತಿ ನೀಡಿದ್ದು, ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದಲ್ಲದೆ, ಮುಂಬೈ ಹೈಕೋರ್ಟ್ ಕ್ರಮಕ್ಕೆ ಅಸಮಧಾನ ವ್ಯಕ್ತಪಡಿಸಿದೆ.
ಸರ್ಕಾರಗಳು ಅನ್ಯ ಉದ್ದೇಶದಿಂದ ವ್ಯಕ್ತಿಗಳನ್ನು ಟಾರ್ಗೆಟ್ ಮಾಡುತ್ತವೆ, ಅಂತಹ ಸಂದರ್ಭದಲ್ಲಿ ನ್ಯಾಯಾಲಯಗಳು ಅಂತಹ ಜನರಿಗೆ ತೊಂದರೆ ಆಗದಂತೆ ಎಚ್ಚರಿಕೆವಹಿಸಬೇಕು. ಸರ್ಕಾರ ಬಂಧಿಸಿದ ಮಾತ್ರಕ್ಕೆ ನ್ಯಾಯಾಲಯ ಚಿಂತಿಸದೆ ಸರ್ಕಾರದಂತೆ ವರ್ತಿಸಬಾರದು. ಕ್ರಿಮಿನಲ್ ಕಾನೂನು ಜನರಿಗೆ ಕಿರುಕುಳ ನೀಡುವ ಅಸ್ತ್ರವಾಗದಂತೆ ನ್ಯಾಯಾಲಯ ಏಕಾಗ್ರತೆವಹಿಸಬೇಕಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.
ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ತೋರಿಸಿ. ನ್ಯಾಯಕ್ಕಾಗಿ ಬರುವ ಪ್ರಜೆಗೆ ಈ ನ್ಯಾಯಾಲಯದ ಬಾಗಿಲು ಸದಾ ತೆರೆದಿರುತ್ತದೆ ಎಂದು ಪೀಠ ಹೇಳಿದೆ.
ತೀರ್ಪನ್ನು ಉಚ್ಚರಿಸುವ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರ ನ್ಯಾಯಪೀಠವು ಬಾಂಬೆ ಹೈಕೋರ್ಟ್ ಪ್ರಕರಣ ವಿಲೇವಾರಿ ಮಾಡುವವರೆಗೂ ಈ ಜಾಮೀನು ಮಧ್ಯಂತರ ಆದೇಶವು ಕಾರ್ಯರೂಪದಲ್ಲಿರುತ್ತದೆ ಎಂದಿದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

