ದೊಡ್ಡಬಳ್ಳಾಪುರ: ಕೊಲೆ ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಮಾಡಿದರೆಂದು ಮಾಾಧಮಗಳಲ್ಲಿ ವರದಿಯಾದ ಕಾರಣ ಇಬ್ಬರು ಸಬ್ ಇನ್ಸ್ ಪೆಕ್ಟರ್ ಗಳನ್ನು ಅಮಾನತ್ತು ಮಾಡಲಾಗಿದೆ.
ನ.22 ರಂದು ತಾಲ್ಲೂಕಿನ ಅಪ್ಪಕಾರನಹಳ್ಳಿ ಗ್ರಾಮದ ರಸ್ತೆ ಬದಿಯ ಟಾಟಾ ಏಸ್ ವಾಹನದಲ್ಲಿ ಮೃತ ದೇಹ ಪತ್ತೆಯಾಗಿತ್ತು. ಈ ಸಂದರ್ಭದಲ್ಲಿ ಸರಹದ್ದಿನ ಗೊಂದಲದಿಂದ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ವಿಳಂಬ ಮಾಡಿದ್ದರೆಂದು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಹಿನ್ನೆಲೆಯಲ್ಲಿ ಇಬ್ಬರು ಸಬ್ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಆದೇಶ ಮಾಡಿದ್ದಾರೆ.
ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಅರುಣ್ ಕಮಾರ್, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಮಂಜೇಗೌಡ ಅಮಾನತ್ತಿಗೆ ಒಳಗಾದವರಾಗಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

