ಹರಿಯಾಣ: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರೋಧಿಸಿ ದೆಹಲಿ ಚಲೋ ಆಂದೋಲನ ನಡೆಸುತ್ತಿರುವ ರೈತರ ವಿರುದ್ಧ ಹರಿಯಾಣ ಪೊಲೀಸರು ಕೊಲೆ ಯತ್ನ, ಗಲಭೆ ಸೃಷ್ಟಿಸಿದ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇಸ್ ದಾಖಲಿಸಿದ್ದಾರೆ.
ರಾಜ್ಯ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಮುಖ್ಯಸ್ಥ ಗುರ್ನಮ್ ಸಿಂಗ್ ಚಾರುಣಿ ಮತ್ತು ಇತರ ರೈತರ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಐಪಿಸಿ ಸೆಕ್ಷನ್ 307(ಕೊಲೆ ಯತ್ನ), 147 (ಗಲಭೆ), 149(ಕಾನೂನುಬಾಹಿರ ಸಭೆ), 186 (ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಯುಂಟುಮಾಡುವುದು) ಮತ್ತು 269(ಕೊರೋನಾ ಮಾರ್ಗಸೂಚಿ ಉಲ್ಲಂಘನೆ) ಅಡಿಯಲ್ಲಿ ನವೆಂಬರ್ 26 ರಂದು ಎಫ್ ಐಆರ್ ದಾಖಲಿಸಲಾಗಿದೆ.
ಹೆಡ್ ಕಾನ್‌ಸ್ಟೆಬಲ್ ಪರ್ದೀಪ್ ಕುಮಾರ್ ಅವರ ದೂರಿನ ಆಧಾರದ ಮೇಲೆ ಪರಾವೊ ಪೊಲೀಸ್ ಠಾಣೆಯಲ್ಲಿ ನೂರಾರು ರೈತರು ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿವೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

