ಬೆಂಗಳೂರು: ದತ್ತು ಮಕ್ಕಳ ಮಾಸಾಚರಣೆ ಬೃಹತ್ ಅಂದೋಲನಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾದಲ್ಲಿಂದು ಮಕ್ಕಳ ಹಕ್ಕುಗಳು ಮತ್ತು ಸಂರಕ್ಷಣೆ ಕುರಿತು ದತ್ತು ಮಕ್ಕಳ ಮಾಸಾಚರಣೆ ಬೃಹತ್ ಅಂದೋಲನಕ್ಕೆ ಚಾಲನೆ ನೀಡಿದರು “ನಂತರ “ದತ್ತು ಮಕ್ಕಳ ಮಾಸಾಚರಣೆ” ಬೃಹತ್ ಅಂದೋಲನದ ಅಂಗವಾಗಿ ದತ್ತು ಮಾಸಾಚರಣೆ ಮಾಹಿತಿಯುಳ್ಳ ಪ್ರಕಟಣೆಯನ್ನು ಬಿಡುಗಡೆಗೊಳಿಸಿದರು.
ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಅನುಸರಿಸಿ.

