ಬೆಂಗಳೂರು: ಬಹುದಿನಗಳ ನಿರೀಕ್ಷೆಯಾಗಿದ್ದ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗವು ಎರಡು ಹಂತದಲ್ಲಿ ಚುನಾವಣೆ ಘೋಷಿಸಿದೆ.
ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮತ್ತು ನೆಲಮಂಗಲ ತಾಲೂಕಿನ 47 ಗ್ರಾಮಪಂಚಾಯಿತಿಗಳಿಗೆ ಡಿ.22ಕ್ಕೆ ಮೊದಲ ಹಂತದಲ್ಲಿ. ಹಾಗೂ ಡಿ.27ರಂದು ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲೂಕಿನ 46 ಗ್ರಾಮಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಮೊದಲ ಹಂತದ ಚುನಾವಣೆಗೆ ಡಿ.11 ನಾಮಪತ್ರ ಸಲ್ಲಿಸಲು ಕೊನೆಯ ದಿನ, ಡಿ.14 ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಎರಡನೇ ಹಂತದ ಚುನಾವಣೆಗೆ ನಾಮ ಪತ್ರ ಸಲ್ಲಿಸಲು ಕೊನೆಯ ದಿನ ಡಿ.12, ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯ ದಿನ ಡಿ.19 ಆಗಿದ್ದು ಡಿ.30ರಂದು ಫಲಿತಾಂಶ ಪ್ರಕಟವಾಗಲಿದೆ.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhani Facebook Twitter ಅನುಸರಿಸಿ.

