ಸಕಾಲ ಸಪ್ತಾಹ ಉದ್ಘಾಟಿಸಿದ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ಸಕಾಲ ಯೋಜನೆಯಡಿ ಸಾರ್ವಜನಿಕ ರಿಂದ ಸ್ವೀಕೃತವಾಗಿ ಬಾಕಿಉಳಿದಿರುವ ಅರ್ಜಿಗಳನ್ನು ಮತ್ತು ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ಹಾಗೂ ಸಾರ್ವಜನಿಕರಿಗೆ ಸಕಾಲ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಸಕಾಲ ಸಪ್ತಾಹ ಕಾರ್ಯಕ್ರಮಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್ ಕುಮಾರ್ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಸೋಮವಾರ ವಿಧಾನಸೌಧದಲ್ಲಿ ಚಾಲನೆ ಮಾಡಿದರು.

ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ನಡೆಸಬೇಕು ಮತ್ತು ಸಕಾಲದ ಅನುಷ್ಠಾನದ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಸಕಾಲ ಸಪ್ತಾಹ ಕಾರ್ಯಕ್ರಮದಿಂದ ಜನ ಸಮಾನ್ಯರಿಗೆ ಅನುಕೂಲವಾಗುವಂತೆ ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಎಲ್ಲಾ ಜಿಲ್ಲಾಧಿಕಾರಿಗಳು ಕೈಜೋಡಿಸಬೇಕು. ಪ್ರತಿಯೊಂದು ಇಲಾಖೆಯಲ್ಲೂ ಸಕಾಲ ಸಪ್ತಾಹದ ಬಗ್ಗೆ ಅರಿವು ಮೂಡಿಸಲು ಬ್ಯಾನರ್‍ಗಳನ್ನು ಕಟ್ಟಬೇಕು ಎಂದು ತಿಳಿಸಿದರು.

ಸಕಾಲ ಸಪ್ತಾಹ ಕಾರ್ಯಕ್ರಮವು ಮೊದಲ ಹಂತದಲ್ಲಿ ನವೆಂಬರ್ 30 ರಿಂದ ಡಿಸೆಂಬರ್ 5ರವರೆಗೆ ನಗಾರಾಭಿವೃದ್ಧಿ, ಕಂದಾಯ, ಸಾರಿಗೆ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆಯಲ್ಲಿ  ನಡೆಯಲಿದೆ. 2ನೇ ಹಂತದಲ್ಲಿ ಡಿ.7ರಿಂದ ಡಿ.11ರವರೆಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ, 3ನೇ ಹಂತದಲ್ಲಿ ಡಿ.14 ರಿಂದ ಡಿ.19ರವರೆಗೆ ಉಳಿದ ಎಲ್ಲಾ ಇಲಾಖೆಗಳಲ್ಲಿ ನಡೆಯಲಿದೆ ಎಂದರು.  

ಈ ಸಕಾಲದಲ್ಲಿ ಒಟ್ಟು 1025 ಸೇವೆಗಳು ದೊರೆಯುತ್ತದೆ. ಈಗಾಗಲೇ 22,88,81,652 ಅರ್ಜಿಗಳು ಬಂದಿದ್ದು, 22,82,55,866 ಅರ್ಜಿಗಳು ವಿಲೇವಾರಿ ಆಗಿದೆ ಎಂದು ತಿಳಿಸಿದರು.

ಸಕಾಲ ಅನುಷ್ಠಾನದಲ್ಲಿ ಮೊದಲ ಮೂರು ಸ್ಥಾನದಲ್ಲಿ ಮಂಡ್ಯ, ಚಿಕ್ಕಮಗಳೂರು ಹಾಗೂ ಚಿಕ್ಕಬಳ್ಳಾಪುರ ಇದ್ದು, ಕೊನೆಯ ಮೂರು ಸ್ಥಾನದಲ್ಲಿ ಬೆಂಗಳೂರು ನಗರ, ಬೀದರ್ ಮತ್ತು ರಾಯಚೂರು ಇದೇ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯದರ್ಶಿರಾದ ಟಿ.ಎಂ.ವಿಜಯ್ ಭಾಸ್ಕರ್, ಸಕಾಲ ಮಿಷನ್ ಅಪರ ನಿರ್ದೇಶಕರಾದ ಡಾ.ಬಿ.ಆರ್.ಮಮತಾ, ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.

ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhani Facebook  Twitter ಅನುಸರಿಸಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]