ಬೆಂಗಳೂರು: ನಾಳೆ ನಡೆಯ ಬೇಕಿದ್ದ ಜಿಲ್ಲಾಪಂಚಾಯಿತಿ ವಿಶೇಷ ಸರ್ವ ಸದಸ್ಯರ ಸಭೆ ಚುನಾವಣೆ ನೀತಿ ಸಂಹಿತೆ ಕಾರಣ ಮುಂದೂಡಲಾಗಿದೆ.
ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಮ್.ನಾಗರಾಜ ಮಾಹಿತಿ ನೀಡಿದ್ದು, ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಗ್ರಾಮ ಪಂಚಾಯತಿ ಚುನಾವಣೆ ಘೋಷಣೆ ಹಿನ್ನೆಲೆ ಜಿಲ್ಲೆಯಲ್ಲಿ ನವೆಂಬರ್ 30 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ವಿ.ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 02 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ವಿಶೇಷ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

