ಬೆಂಗಳೂರು: ದೂಷಿತ ಕಂಪನಿ ಐ ಮಾನಿಟರಿ ಅಡ್ವೈಸರಿ(ಐಎಂಎ) ಹಾಗೂ ಅದರ ಅಂಗ ಸಂಸ್ಥೆಗಳಲ್ಲಿ ಹಣವನ್ನು ತೊಡಗಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೂಡಿಕೆದಾರರಿಂದ ಹಾಗೂ ಸುರಕ್ಷಿತ ಸಾಲಗಾರರಿಂದ ಆನ್‌ಲೈನ್ ಮೂಲಕ ಕ್ಲೈಮು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕ್ಲೈಮು ಅರ್ಜಿ ಸಲ್ಲಿಸಲು ಬಯಸುವವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಾಡ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು 2020ರ ಡಿಸೆಂಬರ್ 24 ಕೊನೆಯ ದಿನವಾಗಿದೆ.
ಸದರಿ ಸಂಸ್ಥೆಗಳಲ್ಲಿ ಹಣವನ್ನು ತೊಡಗಿಸಿರುವ ಹೂಡಿಕೆದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ.

