ದೊಡ್ಡಬಳ್ಳಾಪುರ: ತಾಲೂಕು ಪಂಚಾಯತಿ ಉಪಾಧ್ಯಕ್ಷೆ ಸ್ಥಾನಕ್ಕೆ ಇಂದು ನಡೆದ ಚುನಾವಣೆ ಯಶೋಧಮ್ಮ ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪದ್ಮಾವತಿಅಣ್ಣಯ್ಯಪ್ಪ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣಾಧಿಕಾರಿಯಾಗಿ ಕಾರ್ಯಾನಿರ್ವಹಿಸಿದ ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಸಮ್ಮುಖದಲ್ಲಿ ಚುನಾವಣೆ ನಡೆದಿದ್ದು. ಸಕ್ಕರೆಗೊಲ್ಲಹಳ್ಳಿ ತಾಲೂಕು ಪಂಚಾಯಿತಿ ಸದಸ್ಯೆ ಯಶೋಧಮ್ಮ ಶಿವಕುಮಾರ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆಯಾದರೆಂದು ಚುನಾವಣಾಧಿಕಾರಿ ಘೋಷಿಸಿದರು.
ನೂತನವಾಗಿ ಉಪಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆಯಾದ ಯಶೋಧಮ್ಮ ಶಿವಕುಮಾರ್ ಅವರನ್ನು ತಾಪಂ ಅಧ್ಯಕ್ಷೆ ರತ್ನಮ್ಮ ಜಯರಾಂ, ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಇಒ ಮುರುಡಯ್ಯ, ಎಪಿಎಂಸಿ ಅಧ್ಯಕ್ಷ ಎನ್.ವಿಶ್ವನಾಥ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ಮುಖಂಡರಾದ ಸಂದೇಶ್, ರಾಜ್ ಕುಮಾರ್, ವೆಂಕಟರಾಮು, ಬನವತಿ ವೆಂಕಟೇಶ್ ಸೇರಿದಂತೆ ತಾಪಂ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಮತ್ತಿತರರು ಅಭಿನಂದನೆ ಸಲ್ಲಿಸಿದರು.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ.

