ದೊಡ್ಡಬಳ್ಳಾಪುರ: ಪ್ರತಿಭಟನೆ ಮಾಡುವ ಹಕ್ಕು ನಿಮಗಿದೆ ಹಾಗೆಂದು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿ ಕೊಡಬೇಡಿ ಎಂದು ಡಿವೈಎಸ್ಪಿ ಟಿ.ರಂಗಪ್ಪ ಅವರು ಹೇಳಿದರು.
ಮರಾಠಿ ಅಭಿವೃದ್ಧಿ ನಿಗಮ ರಚನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಡಿ.5ರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದ ಖಾಸಗಿ ಸಭಾಂಗಣದಲ್ಲಿ ನಡೆದ ಕನ್ನಡ ಪರ, ರೈತ ಮತ್ತು ದಲಿತ ಸಂಘಟನೆಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ಶಾಂತಿಯುತ ಬಂದ್ ಗೆ ಇಲಾಖೆಯ ಸಹಕಾರ ಇದೆ, ಮಾನವೀಯ ನೆಲೆಯಲ್ಲಿ ನಿಮ್ಮ ಪ್ರತಿಭಟನೆ ಇರಲಿ ಎಂದು ಸಲಹೆ ನೀಡಿದ ಅವರು, ಪ್ರತಿಭಟನಾ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ವೇಳೆ ಕನ್ನಡಪರ ಹೋರಾಟಗಾರರಾದ ತ.ನ.ಪ್ರಭುದೇವ್, ಸಂಜೀವನಾಯ್ಕ್ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.
ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್, ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಸೋಮಶೇಖರ್, ಗ್ರಾಮಾಂತರ ಠಾಣೆ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ

