ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆ ತಡೆ ಹಿಡಿಯುವಂತೆ ಸ್ಥಳೀಯರ ಮನವಿ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯನ್ನು ರಾಜ್ಯ ಸರ್ಕಾರ ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿಸುವ ನಿರ್ಧಾರ ಸ್ವಾಗತಾರ್ಹವಾಗಿದೆ. ಆದರೆ ಈಗಾಗಲೇ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ನಿಗದಿಯಾಗಿರುವುದರಿಂದ ಚುನಾವಣೆ ಪ್ರಕ್ರಿಯೆಯನ್ನು ತಡೆ ಹಿಡಿದು, ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ನಂತರವೇ ಚುನಾವಣೆ ನಡೆಸಬೇಕಿದೆ ಎಂದು ವಿವಿಧ ಪಕ್ಷಗಳ ಮುಖಂಡರು ಒತ್ತಾಯಿಸಿದ್ದಾರೆ.

ಈ ಕುರಿತು ಸರ್ವ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಮುಖಂಡರು. ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಇಡೀ ರಾಜ್ಯದಲ್ಲಿಯೇ ವಿಶಿಷ್ಟವಾಗಿ ಗುರುತಿಸಿಕೊಂಡಿರುವ ಗ್ರಾಮ ಪಂಚಾಯಿತಿಯಾಗಿದ್ದು, ಹಲವಾರು ಪ್ರಶಸ್ತಿಗಳು ಸಹ ಸಂದಿವೆ. ದಿನೇ ದಿನೇ ಅಭಿವೃದ್ದಿಯತ್ತ ಸಾಗುತ್ತಿರುವ ಈ ಪಂಚಾಯಿತಿಗೆ 2011ರಿಂದ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಲಾಗುತ್ತಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಅದು ಮುಂದೂಡುತ್ತಾ ಬರುತ್ತಿತ್ತು. ಪಂಚಾಯತಿಯ 2 ಗ್ರಾಮಗಳ ಕುರಿತಾಗಿ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಪ್ರಸ್ತುತ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲು ಸಂಪುಟ ಸಭೆ ತೀರ್ಮಾನಿಸಿದ್ದು, ಆಕ್ಷೇಪಣೆ ಗಳಿದ್ದರೆ ಸಲ್ಲಿಸಲು ಸರ್ಕಾರದ ಅಧೀನ ಕಾರ್ಯದರ್ಶಿ ಎ.ವಿಜಯಕುಮಾರ್ ವಿಶೇಷ ರಾಜ್ಯ ಪತ್ರದಲ್ಲಿ  ಅಧಿಸೂಚನೆ ಹೊರಡಿಸಿದ್ದಾರೆ. ಈ ಕ್ರಮಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ. ಆದರೆ ಇಂತಹ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಸೂಕ್ತವಾಗಿಲ್ಲದ ಕಾರಣ, ತಡವಾಗಿಯಾದರೂ ಸರಿ, ಪಟ್ಟಣ ಪಂಚಾಯಿತಿಯನ್ನಾಗಿ ಪರಿವರ್ತಿತವಾದ ನಂತರ ಚುನಾವಣೆ ನಡೆಸಬೇಕಿದೆ. ಈ ಕುರಿತು ಚುನಾವಣಾ ಆಯೋಗಕ್ಕೂ ಮನವಿ ಸಲ್ಲಿಸಲಾಗಿದೆ.

1993ರಲ್ಲಿ ಗ್ರಾಮ ಪಂಚಾಯತಿಯಾಗಿ ರೂಪುಗೊಂಡ ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಈಗ 47 ಮಂದಿ ಸದಸ್ಯರಿದ್ದು, ಇಡೀ ತಾಲೂಕಿನಲ್ಲಿಯೇ ದೊಡ್ಡ ಗ್ರಾಮ ಪಂಚಾಯಿತಿಯಾಗಿದೆ. ಪಕ್ಷಾತೀತವಾಗಿ ಅಭಿವೃದ್ದಿ ಕಾರ್ಯಗಳನ್ನು ಮಾಡುವುದರಲ್ಲಿ ಪಂಚಾಯತಿ ಮಾದರಿಯಾಗಿದ್ದು, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಪಂಚಾಯತಿಯನ್ನು ಪುರಸಭೆಯಾಗಿ ಮಾಡುವಂತೆ ನಾವು ಮನವಿ ಸಲ್ಲಿಸಿದ್ದೆವು. ಆದರೆ ಕೆಲವು ಮಾನದಂಡಗಳಿಂದ ಇದು ಸಾಧ್ಯವಾಗಿಲ್ಲ. ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುತ್ತಿರುವುದು ಸಂತಸದ ಸಂಗತಿ. ಸರ್ಕಾರ ಕೆಐಡಿಬಿಎ ಗೆ ತೆರಿಗೆ ಸಂಗ್ರಹಕ್ಕೆ ಅವಕಾಶ ನೀಡದೇ ಗ್ರಾಮ ಪಂಚಾಯತಿಗೆ ತೆರಿಗೆ ಸಂಗ್ರಹಣ ಮಾಡಲು ಅವಕಾಶ ಮಾಡಿಕೊಡಬೇಕಿದೆ.

ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಾಗಿ  ಮೇಲ್ದರ್ಜೆಗೇರಿದರೆ ಪಂಚಾಯಿತಿ ಅಭಿವೃದ್ದಿಗೆ ಪೂರಕವಾಗಲಿದೆ. ವಿವಿಧ ಮೂಲ ಸೌಕರ್ಯಗಳಿಗೆ ಹೆಚ್ಚಿನ ಅನುದಾನ ಲಭಿಸುತ್ತದೆ. ಮುಂದಿನ ದಿನಗಳಲ್ಲಿ ಪುರಸಭೆಯಾಗುವ ಅವಕಾಶಗಳಿವೆ ಎಂದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ವಿವಿಧ ಪಕ್ಷಗಳ ಮುಖಂಡರು, ಮಾಜಿ ಅಧ್ಯಕರು, ಸದಸ್ಯರು ಹಾಜರಿದ್ದರು.

ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]