ದೊಡ್ಡಬಳ್ಳಾಪುರ: ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ವಿರೋಧಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ನಗರದ ನೆಲದಾಂಜನೇಯ ದೇವಾಲಯದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಸದಸ್ಯರು ತಾಲೂಕು ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು.
ಮೆರವಣಿಗೆಯ ಉದ್ದಕ್ಕೂ ರಾಜ್ಯ ಸರ್ಕಾರ, ಸಿಎಂ ಯಡಿಯೂರಪ್ಪ, ಬಸವಗೌಡ ಪಾಟೀಲ್ ಯತ್ನಾಳ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಆದೇಶ ಹಿಂಪಡೆಯುವಂತೆ ಒತ್ತಾಯಿಸಿದರು.
ಉಳಿದಂತೆ ದೊಡ್ಡಬಳ್ಳಾಪುರ ನಗರದಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ ಬಂದ್ ಯಾವುದೇ ಪರಿಣಾಮ ಬೀರಿಲ್ಲ. ಕೆಎಸ್ಆರ್ಟಿಸಿ ಬಸ್ ಸಂಚಾರ ಯಥಾ ಸ್ಥಿತಿಯಲಿದ್ದು, ವಾಹನ ಸಂಚಾರ ವಿರಳವಾಗಿದೆ.
ಡಿವೈಎಸ್ಪಿ ಟಿ.ರಂಗಪ್ಪ, ಸಬ್ ಇನ್ಸ್ ಪೆಕ್ಟರ್ ಸೋಮಶೇಖರ್ ಹಾಗೂ ಸಿಬ್ಬಂದಿ ಸ್ಥಳದಲ್ಲಿಯೇ ಇದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೂ ಬಸ್ತ್ ಕೈಗೊಂಡಿದ್ದಾರೆ.
ಪ್ರಸ್ತುತ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ಮುಂದುವರೆದಿದೆ.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ.

