ಬೆಂಗಳೂರು: ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2020ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಕಂಡುಬರುವ ಅಬಕಾರಿ ಅಕ್ರಮ ಇತ್ಯಾದಿಗಳ ಕುರಿತು ಅಬಕಾರಿ ಇಲಾಖಾ ನಿಯಂತ್ರಣ ಕೊಠಡಿಗೆ ಮಾಹಿತಿ, ದೂರುಗಳನ್ನು ನೀಡಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದೆ.
ಅಬಕಾರಿ ಅಕ್ರಮ ಸಂಬಂಧಿತ ದೂರುಗಳಿಗಾಗಿ, ಅಬಕಾರಿ ಆಯುಕ್ತರ ಕಚೇರಿ, ಬೆಂಗಳೂರು, ದೂ.ಸಂ.: 1800-4252-550, ಅಬಕಾರಿ ಉಪ ಆಯುಕ್ತರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ.: 080-29787451 ಟೋಲ್ ಫ್ರೀ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿಯ ಫೇಸ್ಬುಕ್ ಪುಟ ಹಾಗೂ ಟ್ವಿಟರ್ನಲ್ಲಿ ಫಾಲೋ ಮಾಡಿ.

