ದೊಡ್ಡಬಳ್ಳಾಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 64 ನೇ ಪುಣ್ಯ ತಿಥಿಯನ್ನು ಪರಿನಿರ್ವಾಣ ದಿನಾಚರಣೆಯಾಗಿ ಆಚರಿಸಲಾಯಿತು.
ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾತನಾಡಿದ ತಹಸೀಲ್ದಾರ್ ಟಿ.ಎಸ್.ಶಿವರಾಜ್, ಜಾತ್ಯಾತೀತ ಮನೋಭಾವಕ್ಕೆ ಪ್ರೇರಣೆ ನೀಡಿ, ಮತದಾನದ ಹನ್ನನ್ನು ಸಾರ್ವತ್ರೀಕರಣಗೊಳಿಸಿದ ಕೀರ್ತಿ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ರೂಪಿಸಿಕೊಟ್ಟ ಭಾರತರತ್ನ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡರೆ ನಮ್ಮ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಎಂದರು.
ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಕಾರಿ ಸೋಮಶೇಖರ್, ಸರ್ಕಲ್ ಇನ್ಸ್‍ಪೆಕ್ಟರ್ ನವೀನ್ ಕುಮಾರ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗರ್, ಕಸಬಾ ರಾಜಸ್ವ ನಿರೀಕ್ಷಕ ಎನ್.ಲಕ್ಷ್ಮೀನರಸಿಂಹಯ್ಯ, ಗ್ರಾಮ ಲೆಕ್ಕಿಗ ರಾಜೇಂದ್ರ ಬಾಬು, ನಗರಸಭೆ ಪರಿಸರ ಅಕಾರಿ ಈರಣ್ಣ, ಹಿರಿಯ ಆರೋಗ್ಯ ನಿರೀಕ್ಷಕಿ ರೂಪಾ ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಮುಖಂಡರು ಮಾಲಾರ್ಪಣೆ ಮಾಡಿ, ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿಯ ಫೇಸ್ಬುಕ್ ಪುಟ ಹಾಗೂ ಟ್ವಿಟರ್ನಲ್ಲಿ ಫಾಲೋ ಮಾಡಿ.

