ಬೆಂಗಳೂರು: ಕೋವಿಡ್-19 ಹಿನ್ನೆಲೆ, ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ, ಡಾ|| ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು 64ನೇ ಪುಣ್ಯಸ್ಮರಣೆಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
“ಸಂವಿಧಾನ ಶಿಲ್ಪಿ, ಡಾ|| ಬಿ.ಆರ್.ಅಂಬೇಡ್ಕರ್” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ಅವರು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸೇರಿದಂತೆ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿಯ ಫೇಸ್ಬುಕ್ ಪುಟ ಹಾಗೂ ಟ್ವಿಟರ್ನಲ್ಲಿ ಫಾಲೋ ಮಾಡಿ.

