ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಪ್ರಸ್ತುತ ನಡೆಸಲಾಗುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೆಲವು ಗ್ರಾಮ ಪಂಚಾಯಿತಿಗಳು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತಿಸಲು ಸರ್ಕಾರವು ಕರಡು ಅಧಿಸೂಚನೆ ಹೊರಡಿಸಿರುವುದರಿಂದ, ರಾಜ್ಯದ ಒಟ್ಟು 26 ಗ್ರಾಮ ಪಂಚಾಯತಿಯನ್ನು ಚುನಾವಣೆಯಿಂದ ಕೈ ಬಿಡಲಾಗಿದೆ.
ಅದರಂತೆ ಭಾಗಶಃ ಅಥವಾ ಪೂರ್ಣ ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತನೆ ಆಗುತ್ತಿರುವುದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯನ್ನು ಚುನಾವಣೆಯಿಂದ ಕೈಬಿಡಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿಯ ಫೇಸ್ಬುಕ್ ಪುಟ ಹಾಗೂ ಟ್ವಿಟರ್ನಲ್ಲಿ ಫಾಲೋ ಮಾಡಿ.

